7

‘ಚುನಾವಣಾ ಪೂರ್ವ ಹೊಂದಾಣಿಕೆ ಇಲ್ಲ’

Published:
Updated:

ಬಸವಕಲ್ಯಾಣ (ಬೀದರ್‌ ಜಿಲ್ಲೆ): ‘ಯಾವುದೇ ಪಕ್ಷದ ಜತೆಯೂ ಚುನಾವಣಾ ಪೂರ್ವ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ’ ಎಂದು ಜೆಡಿಎಸ್‌ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಹೇಳಿದರು.

‘ಈ ಬಾರಿ ಜೆಡಿಎಸ್‌ಗೆ ಬಹುಮತ ಸಿಗುವ ವಿಶ್ವಾಸವಿದೆ. ಈಗಾಗಲೇ ಪಕ್ಷದಿಂದ 145 ಅಭ್ಯರ್ಥಿಗಳ ಪಟ್ಟಿಯನ್ನು ಸಿದ್ಧಪಡಿಸಲಾಗಿದೆ. ಇನ್ನೊಮ್ಮೆ ಪಟ್ಟಿಯನ್ನು ಪರಿಶೀಲಿಸಿದ ನಂತರ ಬಿಡುಗಡೆ ಮಾಡಲಾಗುವುದು’ ಎಂದು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

‘ಕೇಂದ್ರ ಸರ್ಕಾರ ಫಸಲ್ ಬಿಮಾ ಯೋಜನೆ ಜಾರಿಗೊಳಿಸಿದ್ದರೂ ಅದರಿಂದ ಕೃಷಿಕರಿಗೆ ಏನೂ ಪ್ರಯೋಜನವಿಲ್ಲ. ವಿಮಾ ಕಂಪೆನಿಗಳ ಉದ್ಧಾರಕ್ಕಾಗಿ ಮಾತ್ರ ಈ ಯೋಜನೆ ಜಾರಿಗೊಳಿಸಲಾಗಿದೆ’ ಎಂದು ಟೀಕಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry