ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಅಲ್ಪಸಂಖ್ಯಾತರ ಅಭಿವೃದ್ಧಿಗೆ ಸರ್ಕಾರ ಬದ್ಧ’

Last Updated 26 ನವೆಂಬರ್ 2017, 9:34 IST
ಅಕ್ಷರ ಗಾತ್ರ

ರಬಕವಿ ಬನಹಟ್ಟಿ: ‘ಅಲ್ಪಸಂಖ್ಯಾತರ ಅಭಿವೃದ್ಧಿಗಾಗಿ ರಾಜ್ಯದಲ್ಲಿ ₨3850 ಕೋಟಿ ಅನುದಾನ ನೀಡಲಾಗಿದೆ. ಇದರಿಂದ 50 ಲಕ್ಷಕ್ಕೂ ಹೆಚ್ಚು ಜನ ಉಪಯೋಗ ಪಡೆದಿದ್ದಾರೆ’ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವೆ ಉಮಾಶ್ರೀ ತಿಳಿಸಿದರು.

ಸಮೀಪದ ಹೊಸೂರು ಗ್ರಾಮದಲ್ಲಿ ಶನಿವಾರ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯ ಹೆಚ್ಚುವರಿ ಕೊಠಡಿಗಳ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.

ಕ್ಷೇತ್ರದಲ್ಲಿರುವ ಅಲ್ಪಸಂಖ್ಯಾತರ ಅಭಿವೃದ್ಧಿಗೆ ಹತ್ತಾರು ಕಾರ್ಯಕ್ರಮ ಆಯೋಜಿಸಲಾಗಿದೆ. ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಶಾದಿ ಮಹಲ್‌ ನಿರ್ಮಿಸಲಾಗಿದೆ. ಕಾಂಗ್ರೆಸ್‌ ಪಕ್ಷದ ಅಧಿಕಾರ ಅವಧಿಯಲ್ಲಿ ಎಲ್ಲ ಜಾತಿ ಸಮುದಾಯದ ಮಹಾನ್‌ ಪುರುಷರ ಜಯಂತಿ ಆಚರಣೆ ಆರಂಭಿಸಲಾಗಿದೆ ಎಂದರು. ಕಟ್ಟಡ ಕಾಮಗಾರಿಗೆ ಅನುದಾನ ನೀಡಿದ ಸಚಿವೆ ಉಮಾಶ್ರೀ ಅವರನ್ನು ಇದೇ ಸಂದರ್ಭದಲ್ಲಿ ಶಾಲಾ ಆಡಳಿತ ಮಂಡಳಿಯಿಂದ ಸನ್ಮಾನಿಸಲಾಯಿತು.

ಸಮಾರಂಭದಲ್ಲಿ ಸತ್ಯಪ್ಪ ಮಗದುಮ್‌. ಶ್ರೀಶೈಲ ಮೇಣಿ, ಪರಶುರಾಮ ಮನ್ನವ್ವಗೋಳ, ಬಸವರಾಜ ಶಿರೋಳ, ಮೀರಾರಶಬ್‌ ಹೊರಟ್ಟಿ, ರಿಯಾಜ್‌ ಹೊರಟ್ಟಿ, ರಾಜೇಸಾಬ್‌ ಕುಲ್ಲೊಳ್ಳಿ, ಭರಮಪ್ಪ ತುಂಗಳ, ಪರಶುರಾಮ ಪಾಟೀಲ, ರಾಹುಲ ಕಲಾಲ, ಧೂಳಪ್ಪ ಯರಗಟ್ಟಿ, ಗೋವಿಂದ ನಿಂಗಸಾನಿ, ಅಬ್ದುಲ್‌ ಹೊರಟ್ಟಿ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT