7

‘ಕಂಬಳ ಉಳಿವಿಗೆ ಸಂಘಟಿತ ಪ್ರಯತ್ನ’

Published:
Updated:
‘ಕಂಬಳ ಉಳಿವಿಗೆ ಸಂಘಟಿತ ಪ್ರಯತ್ನ’

ಬಂಟ್ವಾಳ: ‘ರೈತ ಜನರ ಕ್ರೀಡೆ ಕಂಬಳವನ್ನು ಉಳಿಸಿ ಮುಂದುವರಿಸಲು ಎಲ್ಲರೂ ಸಂಘಟಿತ ಶ್ರಮ ವಹಿಸಬೇಕು’ ಎಂದು ಸಂಸದ ನಳಿನ್ ಕುಮಾರ್ ಕಟೀಲ್‌ ಹೇಳಿದರು. ಸಿದ್ಧಕಟ್ಟೆ ಸಮೀಪದ ಹೊಕ್ಕಾಡಿ ಗೋಳಿಯಲ್ಲಿ ಶನಿವಾರ ರಾತ್ರಿ ನಡೆದ ವೀರ-ವಿಕ್ರಮ ಜೋಡುಕರೆ ಬಯಲು ಕಂಬಳ ಸಭಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಮಾಜಿ ಸಚಿವ ಬಿ.ನಾಗರಾಜ ಶೆಟ್ಟಿ, ಬಿಜೆಪಿ ಮುಖಂಡ ಉಳಿಪಾಡಿಗುತ್ತು ರಾಜೇಶ ನಾಯ್ಕ್, ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್, ಜಿಲ್ಲಾ ಕಂಬಳ ಸಮಿತಿ ಗೌರವ ಸಲಹೆಗಾರ ಗುಣಪಾಲ ಕಡಂಬ, ಮಾಜಿ ಅಧ್ಯಕ್ಷ ಬೆಳುವಾಯಿ ಸದಾನಂದ ಶೆಟ್ಟಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿಜಯ ಕುಮಾರ್ ಕಂಗಿನ ಮನೆ, ಮೂಡುಬಿದ್ರೆ ಪುರಸಭೆ ಮಾಜಿ ಅಧ್ಯಕ್ಷ ರತ್ನಾಕರ ದೇವಾಡಿಗ, ಮೂಡ ಅಧ್ಯಕ್ಷ ಸುರೇಶ ಪ್ರಭು, ಐಪಿಎಲ್ ಆಟಗಾರ ಕೆ.ಸಿ.ಕಾರ್ಯಪ್ಪ, ಪ್ರೊ. ಕಬಡ್ಡಿ ಆಟ ಗಾರ ಸುಕೇಶ್ ಹೆಗ್ಡೆ, ಅಂತರ ರಾಷ್ಟ್ರೀಯ ಕೀಡಾಪಟು ರೋಹಿತ್ ಕುಮಾರ್ ಕಟೀಲು, ಕಿರುತೆರೆ ನಟ ದಿಲೀಪ್ ಶೆಟ್ಟಿ, ಎಪಿಎಂಸಿ ಸದಸ್ಯ ಎಂ.ಪದ್ಮರಾಜ ಬಲ್ಲಾಳ್, ಬಂಟ್ವಾಳ ರೋಟರಿ ಕ್ಲಬ್ ಅಧ್ಯಕ್ಷ ಸಂಜೀವ ಪೂಜಾರಿ, ಲೊರೆಟ್ಟೊ ರೋಟರಿ ಕ್ಲಬ್ ಅಧ್ಯಕ್ಷ ಅವಿಲ್ ಮಿನೇಜಸ್, ರಾಜ್ಯಪಾಲರ ಪ್ರತಿನಿಧಿ ಎನ್.ಪ್ರಕಾಶ ಕಾರಂತ, ಜಿಲ್ಲಾ ಪಂಚಾಯಿತಿ ಸದಸ್ಯರಾದ ಎಂ.ತುಂಗಪ್ಪ ಬಂಗೇರ, ಬಿ.ಪದ್ಮಶೇಖರ ಜೈನ್, ತಾಲೂಕು ಪಂಚಾಯಿತಿ ಸದಸ್ಯ ಪ್ರಭಾಕರ ಪ್ರಭು, ಆರಂಬೋಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಪ್ರಭಾಕರ ಹುಲಿಮೇರು, ಕುಕ್ಕಿಪಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ ದಿನೇಶ ಸುಂದರ ಶಾಂತಿ, ಗುತ್ತಿಗೆದಾರ ಉದಯ ಕುಮಾರ್ ರಾವ್, ಬಿಜೆಪಿ ಮುಖಂಡರಾದ ಕೆ.ಪಿ.ಜಗದೀಶ ಅಧಿಕಾರಿ, ಕ್ಯಾಪ್ಟನ್ ಬ್ರಿಜೇಶ್ ಚೌಟ, ಹರೀಶ ಪೂಂಜ, ಟಿ.ರಂಜನ್ ಗೌಡ, ಜೋಯ್ಲಸ್ ಡಿಸೋಜ, ಬದ್ರಿನಾಥ್ ಕಾಮತ್, ಜೆಡಿಎಸ್ ಮುಖಂಡ ಅಶ್ವಿನ್ ಜೆ.ಪಿರೇರ, ಜಗನ್ನಾಥ ಶೆಟ್ಟಿ ಚಾವಡಿಮನೆ, ಕೆ.ಮಹಾಬಲ ಆಳ್ವ, ಹೇಮಚಂದ್ರ ಗೌಡ, ನವೀನ್ಚಂದ್ರ ಶೆಟ್ಟಿ  ಇದ್ದ‌ರು.‌

ಸಮಿತಿ ಗೌರವಾಧ್ಯಕ್ಷ ಸಂಜೀವ ಶೆಟ್ಟಿ ಗುಂಡ್ಯಾರು, ಪ್ರಧಾನ ಕಾರ್ಯ ದರ್ಶಿ ಬಾಬು ರಾಜೇಂದ್ರ ಶೆಟ್ಟಿ ಅಜ್ಜಾಡಿ, ಕಾರ್ಯದರ್ಶಿ ಸಂದೇಶ ಶೆಟ್ಟಿ ಪೊಡುಂಬ, ಕೋಶಾಧಿಕಾರಿ ರಾಘವೇಂದ್ರ ಭಟ್ ಹೊಕ್ಕಾಡಿಗೋಳಿ, ಜೊತೆ ಕಾರ್ಯದರ್ಶಿ ಪುಷ್ಪರಾಜ ಜೈನ್ ನಡ್ಯೋಡಿ, ಪುಂಜಾಲಕಟ್ಟೆ ಠಾಣಾಧಿಕಾರಿ ರಾಮ ನಾಯ್ಕ್‌ ಇದ್ದರು.

ಸಮಿತಿ ಅಧ್ಯಕ್ಷ ನೋಣಾಲುಗುತ್ತು ರಶ್ಮಿತ್ ಶೆಟ್ಟಿ ಕೈತ್ರೋಡಿ ಸ್ವಾಗತಿಸಿ, ವಂದಿಸಿದರು. ಸಮಿತಿ ಗೌರವ ಸಲಹೆಗಾರ ಸುರೇಶ ಶೆಟ್ಟಿ ಮತ್ತು ಪ್ರಚಾರ ಸಮಿತಿ ಸಂಚಾಲಕ ಮೋಹನ್ ಕೆ.ಶ್ರೀಯಾನ್ ರಾಯಿ ನಿರೂಪಿಸಿದರು.

ಸರ್ಕಾರ ಸಹಕರಿಸಿದೆ: ಸಚಿವ ರೈ

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಮಾತನಾಡಿ, ‘ರಾಜಾಶ್ರಯದಿಂದ ಜನಾಶ್ರಯ ಮೂಲಕ ಬೆಳೆದು ಬಂದಿರುವ ಕೃಷಿಕರ ನೆಚ್ಚಿನ ಗ್ರಾಮೀಣ ಕ್ರೀಡೆ ಕಂಬಳ ಉಳಿಸುವ ನಿಟ್ಟಿನಲ್ಲಿ ಸರ್ಕಾರ ಕೂಡಾ ಸುಗ್ರೀವಾಜ್ಞೆ ಮೂಲಕ ಸ್ಪಂದಿಸಿದೆ’ ಎಂದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry