7

ಶೌಚಾಲಯ ನಿರ್ಮಿಸಿಕೊಳ್ಳದಿದ್ದರೆ ಸೌಲಭ್ಯ ಕಡಿತ

Published:
Updated:

ಚಾಮರಾಜನಗರ: ಸ್ವಚ್ಛ ಭಾರತ ಅಭಿಯಾನದಡಿ ಬಯಲು ಶೌಚ ನಿರ್ಮೂಲನೆ ಮಾಡುವ ಉದ್ದೇಶದಿಂದ ನಗರಸಭೆ ವ್ಯಾಪ್ತಿಯಲ್ಲಿನ ಎಲ್ಲ ಮನೆಗಳಲ್ಲಿ ವೈಯಕ್ತಿಕ ಶೌಚಾಲಯ ನಿರ್ಮಿಸಿಕೊಳ್ಳುವಂತೆ ಕೋರಲಾಗಿದೆ.

ಡಿ. 30ರೊಳಗೆ ನಗರಸಭೆಯ ಎಲ್ಲ ವಾರ್ಡ್‌ಗಳನ್ನು ಬಯಲು ಶೌಚ ಮುಕ್ತವೆಂದು ಘೋಷಿಸುವ ಗುರಿ ಹೊಂದಲಾಗಿದೆ. ಈಗಾ ಗಲೇ ಕಾರ್ಯಾದೇಶ ನೀಡಿರುವ, ಆಯ್ಕೆ ಯಾಗಿರುವ ಎಲ್ಲ ನಾಗರಿಕರು 7 ದಿನದೊಳಗೆ ಶೌಚಾ ಲಯ ನಿರ್ಮಿಸಿ ಕೊಳ್ಳಬೇಕು. ತಪ್ಪಿದಲ್ಲಿ ಅರ್ಜಿಗಳನ್ನು ರದ್ದುಗೊಳಿಸಲಾ ಗುವುದು. ಬಳಿಕ, ಸ್ವಂತ ಖರ್ಚಿನಿಂದಲೇ ಶೌಚಾಲಯ ನಿರ್ಮಿಸಿಕೊಳ್ಳಬೇಕಾಗುತ್ತದೆ.

ವೈಯಕ್ತಿಕ ಶೌಚಾಲಯ ನಿರ್ಮಿಸಿಕೊಳ್ಳದೆ, ಬಯಲನ್ನೇ ಶೌಚಕ್ಕೆ ಬಳಸಿಕೊಂಡರೆ ಅಂತಹವರ ವಿರುದ್ಧ ಕಾನೂನು ರೀತಿ ಕ್ರಮ ಜರುಗಿಸಲಾಗುವುದು ಮತ್ತು ಎಲ್ಲ ಸರ್ಕಾರಿ ಸೌಲಭ್ಯಗಳನ್ನು ಕಡಿತಗೊಳಿಸಲಾಗುವುದು ಎಂದು ನಗರಸಭೆ ಪ್ರಕಟಣೆ ತಿಳಿಸಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry