5
X

'ಪ್ರಜಾವಾಣಿ'ಯ ಜಾಲತಾಣವನ್ನು ಹೆಚ್ಚು ಓದುಗ ಸ್ನೇಹಿಯಾಗಿಸುವ ಉದ್ದೇಶದಿಂದ ಹೊಸ ವಿನ್ಯಾಸವನ್ನು ರೂಪಿಸಲಾಗಿದೆ.
ಈ ವಿನ್ಯಾಸದ ಕುರಿತ ನಿಮ್ಮ ಅಭಿಪ್ರಾಯಗಳನ್ನು ಇಲ್ಲಿರುವ ಲಿಂಕ್ ಕ್ಲಿಕ್ಕಿಸುವ ಮೂಲಕ ನಮಗೆ ತಿಳಿಸಬಹುದು

webfeedback@prajavani.co.in

ಜಾರ್ಜ್‌, ವಿನಯ್‌ ರಾಜೀನಾಮೆಗೆ ಆಗ್ರಹ

Published:
Updated:

ಬೆಳಗಾವಿ: ಸಚಿವರಾದ ಕೆ.ಜೆ. ಜಾರ್ಜ್‌ ಹಾಗೂ ವಿನಯ ಕುಲಕರ್ಣಿ ರಾಜೀನಾಮೆ ಪಡೆಯುವಂತೆ ಆಗ್ರಹಿಸಿ ಬಿಜೆಪಿ ನಗರ ಘಟಕದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.

‘ಡಿವೈಎಸ್‌ಪಿ ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಜಾರ್ಜ್‌ ಹೆಸರು ಪ್ರಮುಖವಾಗಿ ಕೇಳಿಬರುತ್ತಿದೆ. ಸಿಬಿಐ ತನಿಖೆಯೂ ನಡೆಯುತ್ತಿದೆ. ಆದರೂ ಅವರು ಸಚಿವ ಸ್ಥಾನದಲ್ಲಿ ಮುಂದುವರಿದಿರುವುದು ದುರದೃಷ್ಟಕರ. ಧಾರವಾಡ ಜಿಲ್ಲಾ ಪಂಚಾಯ್ತಿ ಸದಸ್ಯ ಯೋಗೀಶ್‌ ಗೌಡ ಹತ್ಯೆ ಪ್ರಕರಣದಲ್ಲಿ ವಿನಯ ಅವರ ಕೈವಾಡವಿದೆ’ ಎಂದು ದೂರಿದರು.

‘ಎರಡೂ ಪ್ರಕರಣದಲ್ಲಿ ಸರ್ಕಾರ ಹಾಗೂ ಕಾಂಗ್ರೆಸ್‌ ಪಕ್ಷ ಸಚಿವರ ಬೆನ್ನಿಗೆ ನಿಂತಿವೆ. ಸರ್ಕಾರದಿಂದ ತಮಗೆ ರಕ್ಷಣೆ ದೊರೆಯುತ್ತದೆ ಎನ್ನುವ ಭರವಸೆಯನ್ನು ಜನಸಾಮಾನ್ಯರು ಕಳೆದುಕೊಂಡಿದ್ದಾರೆ. ತನಿಖೆ ಪಾರದರ್ಶಕವಾಗಿ ನಡೆಯಬೇಕಾದರೆ ಆರೋಪಿ ಸ್ಥಾನದಲ್ಲಿರುವ ಸಚಿವರು ಅವರ ಸ್ಥಾನಕ್ಕೆ ಕೂಡಲೇ ರಾಜೀನಾಮೆ ನೀಡಬೇಕು. ಈ ವಿಷಯದಲ್ಲಿ ಮಧ್ಯಪ್ರವೇಶ ಮಾಡಬೇಕು’ ಎಂದು ಕೋರಿ ಜಿಲ್ಲಾಧಿಕಾರಿ ಕಚೇರಿ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.

ನಗರ ಘಟಕದ ಪ್ರಧಾನ ಕಾರ್ಯದರ್ಶಿ ರಾಜಕುಮಾರ ಟೋಪಣ್ಣವರ, ಪ್ರಧಾನ ಕಾರ್ಯದರ್ಶಿ ಶಶಿಕಾಂತ ಪಾಟೀಲ ಪ್ರತಿಭಟನೆಯ ನೇತೃತ್ವ ವಹಿಸಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry