7

ವಿನಯ್‌ ಕುಲಕರ್ಣಿ ರಾಜೀನಾಮೆಗೆ ಒತ್ತಾಯ

Published:
Updated:

ಕಲಬುರ್ಗಿ: ‘ಧಾರವಾಡ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶ್‌ ಗೌಡ ಕೊಲೆ ಪ್ರಕರಣದಲ್ಲಿ ಸಚಿವ ವಿನಯ್‌ ಕುಲಕರ್ಣಿ ಅವರ ಪಾತ್ರವಿದ್ದು, ಕೂಡಲೇ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು’ ಎಂದು ಬಿಜೆಪಿ ಮುಖಂಡ ಬಾಬುರಾವ ಚವಾಣ್‌ ಒತ್ತಾಯಿಸಿದರು.

ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಯೋಗೀಶ್‌ ಗೌಡ ಕೊಲೆ ತನಿಖೆಯಲ್ಲಿ ಸಚಿವರು ಹಸ್ತಕ್ಷೇಪ ಮಾಡುತ್ತಿದ್ದಾರೆ. ವಕೀಲರಿಗೆ ಧಮಕಿ ಹಾಕಿದ್ದಾರೆ. ಸಚಿವ ಸ್ಥಾನವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಹೀಗಾಗಿ ಕೊಲೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು’ ಎಂದು ಒತ್ತಾಯಿಸಿದರು.

‘ಜಿಲ್ಲೆಯಲ್ಲಿನ ಲಂಬಾಣಿ ಅಭಿವೃದ್ಧಿ ಕಚೇರಿ ಶಾಸಕರ ಮನೆಯಲ್ಲಿಯೇ ಇದೆ. ಅದನ್ನು ಜಿಲ್ಲಾಧಿಕಾರಿ ಕಚೇರಿಗೆ ಸ್ಥಳಾಂತರಿಸಬೇಕು. ಕಾಂಗ್ರೆಸ್‌ ಸರ್ಕಾರ ಬಂಜಾರಾ ಭವನ ಕಟ್ಟಡ ಕಾಮಗಾರಿ ಪೂರ್ಣಗೊಳಿಸದೆ ನಿರ್ಲಕ್ಷ್ಯ ವಹಿಸಿದೆ’ ಎಂದು ದೂರಿದರು.

‘ಕಲಬುರ್ಗಿ ಗ್ರಾಮೀಣ ಕ್ಷೇತ್ರಕ್ಕೆ ಪಕ್ಷದಿಂದ ಸ್ಪರ್ಧಿಸಲು ನಾನೂ ಆಕಾಂಕ್ಷಿಯಾಗಿದ್ದೇನೆ. ಟಿಕೆಟ್‌ ನೀಡುವ ಕುರಿತು ವರಿಷ್ಠರು ನಿರ್ಧಾರ ಕೈಗೊಳ್ಳಲಿದ್ದಾರೆ’ ಎಂದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry