7

‘ಜೆಡಿಎಸ್ ಪಕ್ಷದ ಪರ ಮತದಾರರ ಒಲವು’

Published:
Updated:

ಕುಶಾಲನಗರ: ಮುಂದಿನ ವಿಧಾನ ಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಅಧಿಕ ಸ್ಥಾನಗಳಲ್ಲಿ ಗೆಲುವು ಸಾಧಿಸುವ ಮೂಲಕ ರಾಜ್ಯದ ಅಧಿಕಾರ ಹಿಡಿಯಲಿದೆ ಎಂದು ಎಚ್.ಡಿ. ಕುಮಾರಸ್ವಾಮಿ ಅಭಿಮಾನಿಗಳ ವೇದಿಕೆ ಕೊಡಗು ಜಿಲ್ಲಾಧ್ಯಕ್ಷ ಮಲ್ಲೇಶ್ ಗೌಡ ಹೇಳಿದರು.

ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊಡಗು ಜಿಲ್ಲೆಯಲ್ಲಿಯೂ ಜೆಡಿಎಸ್ ಪರವಾದ ಅಲೆಯಿದೆ. ಈ ಬಾರಿ ಎರಡು ಕ್ಷೇತ್ರಗಳಲ್ಲಿಯೂ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದರು.

ಪಕ್ಷದ ವರಿಷ್ಠರ ಆದೇಶದಂತೆ ಜಿಲ್ಲೆಯಲ್ಲಿ ಪಕ್ಷ ಸಂಘಟನೆಗೆ ಹೆಚ್ಚಿನ ಒತ್ತು ನೀಡುತ್ತಿದ್ದೇನೆ. ಪಕ್ಷದಿಂದ ಸ್ಪರ್ಧಿಸುವ ಅಭ್ಯರ್ಥಿ ಪರವಾಗಿ ಕೆಲಸ ಮಾಡುವ ಮೂಲಕ ಗೆಲುವಿಗೆ ಶ್ರಮಿಸುವುದಾಗಿ ಹೇಳಿದರು.

ಹಾಲಿ ಶಾಸಕರು ಮಡಿಕೇರಿ ಕ್ಷೇತ್ರವನ್ನು ಸಂಪೂರ್ಣ ಕಡೆಗಣಿಸಿದ್ದಾರೆ. ಹೇಳಿಕೊಳ್ಳುವಂತ ಯಾವುದೇ ಅಭಿವೃದ್ಧಿ ಕಾರ್ಯಗಳು ಆಗಿಲ್ಲ. ಸೋಮವಾರಪೇಟೆ ತಾಲ್ಲೂಕಿನ ರಸ್ತೆಗಳಲ್ಲಿ ತಿರುಗಾಡಿದರೆ ಶಾಸಕರ ಬಂಡವಾಳ ಗೋತ್ತಾಗುತ್ತದೆ ಎಂದರು.

ಮತದಾರರು ಈ ಬಾರಿ ಪರ್ಯಾಯ ನಾಯಕರ ಚಿಂತನೆಯಲ್ಲಿದ್ದಾರೆ. ಈ ಹಿಂದೆ ಪಕ್ಷದ ಹಿರಿಯ ನಾಯಕ ಬಿ.ಎ.ಜೀವಿಜಯ ಅವರು ಸಚಿವರಾಗಿದ್ದ ಅವಧಿಯಲ್ಲಿ ಆದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮೆಚ್ಚಿಗೆ ವ್ಯಕ್ತಪಡಿಸುತ್ತಿದ್ದಾರೆ. ಈ ಅವಕಾಶವನ್ನು ಸದುಪಯೋಗ ಪಡಿಸಿಕೊಂಡು, ಪಕ್ಷದ ಗೆಲುವಿಗೆ ಶ್ರಮಿಸಲಾಗುತ್ತದೆ ಎಂದರು. ಗೋಷ್ಠಿಯಲ್ಲಿ ತಾ.ಪಂ.ಸದಸ್ಯ ಪ್ರಸನ್ನ, ಮುಖಂಡ ಧರುಣೇಶ್ ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry