ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಷ್ಟ್ರದಲ್ಲಿಯೇ ರಾಜ್ಯ ರಸ್ತೆ ಸಾರಿಗೆ ಉತ್ತಮ ಹೆಸರು

Last Updated 28 ನವೆಂಬರ್ 2017, 9:25 IST
ಅಕ್ಷರ ಗಾತ್ರ

ಶಿಕಾರಿಪುರ: ‘ರಾಷ್ಟ್ರದಲ್ಲಿಯೇ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಉತ್ತಮ ಹೆಸರು ಪಡೆದಿದೆ’ ಎಂದು ಸಾರಿಗೆ ಸಚಿವ ಎಚ್.ಎಂ. ರೇವಣ್ಣ ಹೇಳಿದರು. ಪಟ್ಟಣದಲ್ಲಿ ಸೋಮವಾರ ಕೆಎಸ್‌ಆರ್‌ಟಿಸಿ ನೂತನ ಬಸ್‌ ನಿಲ್ದಾಣವನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ ಪ್ರಸ್ತುತ 210 ಪ್ರಶಸ್ತಿಗಳನ್ನು ಪಡೆದಿದೆ. ಸಾರ್ವಜನಿಕರ ಅನುಕೂಲಕ್ಕಾಗಿ ಹೆಚ್ಚು ಪಾಸು ನೀಡಿದ ಖ್ಯಾತಿ ಸಾರಿಗೆ ನಿಗಮಕ್ಕೆ ಇದೆ. ಅನ್ನಭಾಗ್ಯ, ಕ್ಷೀರಭಾಗ್ಯ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಅಭಿವೃದ್ಧಿಗೆ ಸಹಕಾರ ನೀಡಿದ್ದಾರೆ’ ಎಂದು ಶ್ಲಾಘಿಸಿದರು.

‘ಪ್ರತಿ ಹಳ್ಳಿಗೆ ಸಾರಿಗೆ ಸೌಲಭ್ಯ ನೀಡುವ ಉದ್ದೇಶವನ್ನು ಸರ್ಕಾರ ಹೊಂದಿದೆ. ಸೂಕ್ತ ಭೂಮಿ ನೀಡಿದರೆ ಶಾಸಕ ರಾಘವೇಂದ್ರ ಮನವಿಯಂತೆ ಡಿಪೊ ನಿರ್ಮಾಣಕ್ಕೆ ಮಂಜೂರಾತಿ ನೀಡುತ್ತೇನೆ. ತಾಲ್ಲೂಕಿನಲ್ಲಿ ಹೆಚ್ಚು ಬಸ್‌ಗಳನ್ನು ಬಿಡುತ್ತೇವೆ’ ಎಂದು ಭರವಸೆ ನೀಡಿದರು,

ಜಿಲ್ಲಾ ಉಸ್ತುವಾರಿ ಸಚಿವ ಕಾಗೋಡು ತಿಮ್ಮಪ್ಪ ಮಾತನಾಡಿ, ‘ಉದ್ಘಾಟನೆಯಾದ ಬಸ್‌ನಿಲ್ದಾಣ ಮಾದರಿ ಬಸ್‌ನಿಲ್ದಾಣ ಆಗಬೇಕು. ಮಾಜಿ ಮುಖ್ಯಮಂತ್ರಿ . ಯಡಿಯೂರಪ್ಪ ಹಾಗೂ ಶಾಸಕ ರಾಘವೇಂದ್ರ ಪ್ರಯತ್ನದಿಂದ ಬಸ್‌ನಿಲ್ದಾಣ ಆಗಿದೆ’ ಎಂದರು.

ಶಾಸಕ ಬಿ.ವೈ. ರಾಘವೇಂದ್ರ ಮಾತನಾಡಿ, ‘ಪಟ್ಟಣದ ಅಭಿವೃದ್ಧಿಗೆ ನೂತನ ಕೆಎಸ್‌ಆರ್‌ಟಿಸಿ ಬಸ್‌ನಿಲ್ದಾಣ ನಿರ್ಮಾಣವಾಗಿರುವುದು ಮೈಲು ಗಲ್ಲಾಗಿದೆ. ತಾಲ್ಲೂಕಿನ ಜನತೆಯ ಬಹುದಿನದ ಕನಸು ನನಸಾಗಿದೆ. ಬಸ್‌ ಡಿಪೊ ನಿರ್ಮಿಸಲು 4 ಎಕರೆ ಭೂಮಿಯನ್ನು ನೀಡಲು ನಾವು ಸಿದ್ಧರಿದ್ದೇವೆ. ಶೀಘ್ರ ಡಿಪೊ ನಿರ್ಮಾಣ ಮಾಡುವ ಮೂಲಕ ಜನರಿಗೆ ಹೆಚ್ಚಿನ ಬಸ್‌ ಸೌಲಭ್ಯ ನೀಡಬೇಕು’ ಎಂದು ಮನವಿ ಮಾಡಿದರು.

ವಿಧಾನ ಪರಿಷತ್‌ ಸದಸ್ಯ ಆರ್‌. ಪ್ರಸನ್ನ ಕುಮಾರ್‌ ಮಾತನಾಡಿ, ‘ಪಟ್ಟಣದಲ್ಲಿ ಈ ಬಸ್‌ ನಿಲ್ದಾಣ ನಿರ್ಮಾಣವಾಗಲು ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರಣರಾಗಿದ್ದಾರೆ’ ಎಂದು ಶ್ಲಾಘಿಸಿದರು.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಅಭಿವೃದ್ಧಿ ನಿಗಮ ಅಧ್ಯಕ್ಷ ಗೋಪಾಲ ಪೂಜಾರಿ, ‘ಕರ್ನಾಟಕ ಜೀವ ವೈವಿಧ್ಯ ಮಂಡಳಿ ಅಧ್ಯಕ್ಷ ಎಸ್‌.ಪಿ. ಶೇಷಾದ್ರಿ, ‘ಕಾಡಾ’ ಮಾಜಿ ಅಧ್ಯಕ್ಷ ನಗರದ ಮಹದೇವಪ್ಪ, ಪುರಸಭೆ ಅಧ್ಯಕ್ಷೆ ರತ್ನಮ್ಮ ಸೂರ್ಯಕಾಂತಪ್ಪ, ಉಪಾಧ್ಯಕ್ಷೆ ಫೈರೋಜಾಭಾನು, ಸ್ಥಾಯಿ ಸಮಿತಿ ಅಧ್ಯಕ್ಷ ನಾಗರಾಜಗೌಡ್ರು, ಸದಸ್ಯೆ ಗೌರಮ್ಮ ಪಿ. ರಾಮಯ್ಯ, ಜಿಲ್ಲಾ ಪಂಚಾಯ್ತಿ ಸದಸ್ಯರಾದ ಎಚ್.ಪಿ. ನರಸಿಂಗನಾಯ್ಕ, ರೇಣುಕಾ ಹನುಮಂತಪ್ಪ, ಅರುಂಧತಿ ರಾಜೇಶ್, ಮಮತಾಸಾಲಿ, ತಾಲ್ಲೂಕು ಪಂಚಾಯ್ತಿ ಅಧ್ಯಕ್ಷ ಪರಮೇಶ್ವರಪ್ಪ. ಉಪಾಧ್ಯಕ್ಷೆ ರೂಪಾ ದಯಾನಂದ್‌, ಕೆಎಸ್ಆರ್‌ಟಿಸಿ ಇಲಾಖೆ ಅಧಿಕಾರಿಗಳು, ಪುರಸಭೆ ಸದಸ್ಯರು. ತಾಲ್ಲೂಕು ಪಂಚಾಯ್ತಿ ಸದಸ್ಯರು ಉಪಸ್ಥಿತರಿದ್ದರು.

ಕಾಂಗ್ರೆಸ್‌ ಬಿಜೆಪಿ ಮುಖಂಡರಿಂದ ಜಯಘೋಷ:  ಬಸ್‌ ನಿಲ್ದಾಣ ಉದ್ಘಾಟನಾ ಸಮಾರಂಭದಲ್ಲಿ ಕಾಂಗ್ರೆಸ್ ಮುಖಂಡರು ಮುಖ್ಯಮಂತ್ರಿ ಸಿದ್ದರಾಮಯ್ಯ ಪರ ಘೋಷಣೆ ಕೂಗಿದರು. ಬಿಜೆಪಿ ಮುಖಂಡರು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪರ ಘೋಷಣೆ ಕೂಗಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್‌ ಹಾಗೂ ಬಿಜೆಪಿ ಮುಖಂಡರ ಮಧ್ಯೆ ಪರಸ್ಪರ ಮಾತಿನ ಚಕಮಕಿ ನಡೆಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT