7

ಪೇಜಾವರ ವಿರುದ್ಧ ಪ್ರತಿಭಟನೆ ಹಿಂದೆ ಕಾಂಗ್ರೆಸ್: ಯಶ್‌ಪಾಲ್ ಸುವರ್ಣ

Published:
Updated:

ಉಡುಪಿ: ‘ಪೇಜಾವರ ಸ್ವಾಮೀಜಿ ಅವರ ಹಿಂದೆ ನಡೆಯುತ್ತಿರುವ ಪ್ರತಿಭಟನೆಯ ಹಿಂದೆ ಕಾಂಗ್ರೆಸ್‌ ಸರ್ಕಾರ ಮತ್ತು ಬುದ್ಧಿಜೀವಿಗಳ ಕೈವಾಡ ಇದೆ’ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಯಶ್‌ಪಾಸ್‌ ಸುವರ್ಣ ಗಂಭೀರ ಆರೋಪ ಮಾಡಿದ್ದಾರೆ.

‘ಧರ್ಮ ಸಂಸತ್‌ಗೆ ಸಿಕ್ಕಿರುವ ಅಭೂತಪೂರ್ವ ಬೆಂಬಲವನ್ನು ಅರಗಿಸಿಕೊಳ್ಳಲಾಗದೆ ಇಂತಹ ವಾಮ ಮಾರ್ಗ ಅನುಸರಿಸುತ್ತಿದ್ದಾರೆ. ರಾಜಕೀಯ ಕಾರಣಗಳಿಗಾಗಿ ವಿನಾಕಾರಣ ಆರೋಪ ಮಾಡುತ್ತಿದ್ದಾರೆ. ಇದೇ ರೀತಿ ಮುಂದುವರೆದರೆ ಮುಂದಿನ ಪರಿಣಾಮ ಎದುರಿಸಬೇಕಾಗುತ್ತದೆ’ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

ಅವರು ಅಲ್ಪಸಂಖ್ಯಾತ ಮತ್ತು ಬಹುಸಂಖ್ಯಾತರ ಮಧ್ಯೆ ಸರ್ಕಾರ ಮಾಡುತ್ತಿರುವ ತಾರತಮ್ಯವನ್ನು ಸ್ವಾಮೀಜಿ ಖಂಡಿಸಿದ್ದಾರೆ. ದಲಿತರು ಅಥವಾ ಅಂಬೇಡ್ಕರ್ ಅವರ ಬಗ್ಗೆ ಮಾತನಾಡಿಲ್ಲ’ ಎಂದು ತಿಳಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry