7

ಪೇಜಾವರ ಶ್ರೀ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಲು ಒತ್ತಾಯ

Published:
Updated:

ಚಿಕ್ಕಮಗಳೂರು: ‘ದೇಶದ ಸಂವಿಧಾನ ಮರುರಚನೆಯಾಗಬೇಕು ಎಂದು ಹೇಳಿಕೆ ನೀಡಿರುವ ಉಡುಪಿ ಪೇಜಾವರ ಶ್ರೀಗಳ ವಿರುದ್ಧ ದೇಶ ದ್ರೋಹದ ಪ್ರಕರಣ ದಾಖಲಿಸಬೇಕು’ ಎಂದು ಬಿ.ಆರ್.ಅಂಬೇಡ್ಕರ್ ಆಟೊ ಮಾಲೀಕರು ಮತ್ತು ಚಾಲಕರ ಸಂಘದ ಸದಸ್ಯರು ಈಚೆಗೆ ಪ್ರತಿಭಟನೆ ನಡೆಸಿದರು. ತಾಲ್ಲೂಕು ಕಚೇರಿ ಆವರಣದಲ್ಲಿ ಜಮಾಯಿಸಿದ ಕಾರ್ಯಕರ್ತರು, ಆಜಾದ್ ಪಾರ್ಕ್ ವೃತ್ತದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು.

‘ಬಿ.ಆರ್.ಅಂಬೇಡ್ಕರ್ ಒಬ್ಬರೇ ಸಂವಿಧಾನ ರಚಿಸಿಲ್ಲ’ ಎಂಬ ಹೇಳಿಕೆಯ ಮೂಲಕ ಅಂಬೇಡ್ಕರ್ ಅವರಿಗೆ ಅವಮಾನಿಸಲಾಗಿದೆ. ದೇಶದ ಸಂವಿಧಾನದ ಬಗ್ಗೆ ನಂಬಿಕೆ ಇಲ್ಲದವರು ದೇಶ ಬಿಟ್ಟು ತೊಲಗಲಿ ಎಂದು ಪ್ರತಿಭಟನಕಾರರು ಒತ್ತಾಯಿಸಿದರು.

ಬಿಎಸ್‌ಪಿ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಟಿ.ರಾಧಾಕೃಷ್ಣ, ಮುಖಂಡರಾದ ರಾಮಚಂದ್ರ, ಮರ್ಲೆ ಅಣ್ಣಯ್ಯ, ಸಿ.ಎಂ.ಮಲ್ಲಿಕಾರ್ಜುನ್, ಪುರುಷೋತ್ತಮ್, ಗಣೇಶ್, ಬಾಲರಾಜ್, ನಿಂಗರಾಜ್, ಹೊನ್ನಪ್ಪ ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry