7

ಸಾಲಮನ್ನಾ ಮಾಡದ ಕೇಂದ್ರ: ರಾಯರಡ್ಡಿ

Published:
Updated:

ಯಲಬುರ್ಗಾ: ‘ರಾಜ್ಯ ಸರ್ಕಾರ ಸಹಕಾರ ಸಂಘಗಳಲ್ಲಿನ ರೈತರ ಸಾಲ ಮನ್ನಾ ಮಾಡಿದೆ. ಆದರೆ, ಕೇಂದ್ರ ಸರ್ಕಾರ ರಾಷ್ಟ್ರೀಕೃತ ಬ್ಯಾಂಕಿನಲ್ಲಿ ರೈತರು ಪಡೆದ ಸಾಲಮನ್ನಾ ಮಾಡದೆ ರೈತ ವಿರೋಧಿ ನೀತಿ ಅನುಸರಿಸುತ್ತಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ರಾಯರಡ್ಡಿ ಆರೋಪಿಸಿದರು.

ತಾಲ್ಲೂಕಿನ ಗೆದಗೇರಿ ಗ್ರಾಮದಲ್ಲಿ ಭಾನುವಾರ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ‘ದಲಿತರ, ಬಡವರ, ಅಲ್ಪಸಂಖ್ಯಾಂತರ ಹಾಗೂ ಹಿಂದುಳಿದವರ ಕಲ್ಯಾಣಕ್ಕಾಗಿ, ರಾಜ್ಯ ಸರ್ಕಾರ ಜನಪರ ಯೋಜನೆಗಳನ್ನು ಜಾರಿಗೆ ತಂದಿದೆ’ ಎಂದರು.

‘ಕೊಪ್ಪಳ ಏತ ನೀರಾವರಿ ಯೋಜನೆಯ ಮೂರನೇ ಹಂತದ ಕಾಮಗಾರಿಗಳಿಗೆ ₹2,365 ಕೋಟಿ ಅನುದಾನ ಬಿಡುಗಡೆಗೆ ಮುಖ್ಯಮಂತ್ರಿ ಭರವಸೆ ನೀಡಿದ್ದು, ಶೀಘ್ರ ಟೆಂಡರ್ ಪ್ರಕ್ರಿಯೆ ನಡೆಯಲಿದೆ. ನೀರಾವರಿ ಯೋಜನೆಗೆ ಸಂಬಂಧಿಸಿದಂತೆ ಪರಿಹಾರ ವಿತರಣೆಗೆ ನೀರಾವರಿ ಸಮಿತಿ ರಚಿಸಲಾಗಿದೆ. ಸಮಿತಿ ಸದಸ್ಯನಾಗಿ ಆಯ್ಕೆಯಾಗಿದ್ದೇನೆ’ ಎಂದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಸವರಾಜ ಉಳ್ಳಾಗಡ್ಡಿ, ಜಿಲ್ಲಾ ಪಂಚಾಯಿತಿ ಸದಸ್ಯ ಹನಮಂತಗೌಡ ಪಾಟೀಲ, ಗಿರಿಜಾ ಸಂಗಟಿ, ಸದಸ್ಯೆ ಸಾವಿತ್ರಿ ಗೊಲ್ಲರ, ಓಬಳಪ್ಪ, ಮುಖಂಡರಾದ ಬಿ.ಎಂ.ಶಿರೂರು, ರೇವಣಪ್ಪ ಸಂಗಟಿ, ಉಮಾಪತಿ ಶೆಟ್ಟರ, ತಾ.ಪಂ ಇಒ ಕೆ.ತಿಮ್ಮಪ್ಪ, ಮಹ್ಮದ ಕಲಿಮುದ್ದಿನ್ ಅಹ್ಮದ, ಎಸ್.ಬಿ.ಭಜಂತ್ರಿ ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry