ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

40 ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲು

Last Updated 30 ನವೆಂಬರ್ 2017, 11:15 IST
ಅಕ್ಷರ ಗಾತ್ರ

ಕುಷ್ಟಗಿ: ತಾಲ್ಲೂಕಿನ ತಳುವಗೇರಾ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಬುಧವಾರ ಮಧ್ಯಾಹ್ನದ ಬಿಸಿಯೂಟ ಸೇವಿಸಿದ ಸುಮಾರು 40 ವಿದ್ಯಾರ್ಥಿಗಳು ವಾಂತಿಯಿಂದ ಅಸ್ವಸ್ಥಗೊಂಡಿದ್ದಾರೆ.

ಸಂಜೆ ಶಾಲೆ ಬಿಟ್ಟ ನಂತರ ಕೆಲವು ಮಕ್ಕಳು ವಾಂತಿ ಮಾಡಿಕೊಂಡರು. ನಂತರ ಸಾಮೂಹಿಕವಾಗಿ ವಾಂತಿ ಮಾಡಿಕೊಳ್ಳಲಾರಂಭಿಸಿದರು. ಪಾಲಕರು ಮತ್ತು ಶಿಕ್ಷಕರು ಆ್ಯಂಬುಲೆನ್ಸ್‌ ಮೂಲಕ ಮಕ್ಕಳನ್ನು ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದರು.

ಮಕ್ಕಳಿಗೆ ಚಿಕಿತ್ಸೆ ನೀಡಲಾಗಿದ್ದು ಯಾವುದೆ ತೊಂದರೆ ಇಲ್ಲ, ಚೇತರಿಕೊಳ್ಳುತ್ತಿದ್ದಾರೆ ಎಂದು ವೈದ್ಯರಾದ ಡಾ.ಚಂದ್ರಕಾಂತ ಮಂತ್ರಿ, ಡಾ.ಕೆ.ಎಸ್‌.ರೆಡ್ಡಿ ತಿಳಿಸಿದರು.

ಬಿಸಿಯೂಟಕ್ಕೆ ಪಲಾವ್‌ ಮತ್ತು ಹಾಲಿನ ಪುಡಿಯಿಂದ ತಯಾರಿಸಲಾಗಿದ್ದ ಮೊಸರನ್ನು ನೀಡಲಾಗಿತ್ತು. ಎಂದು ಶಾಲೆ ಮುಖ್ಯಶಿಕ್ಷಕಿ ಕಮಲಾಕ್ಷಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT