ಶನಿವಾರ, ಫೆಬ್ರವರಿ 27, 2021
25 °C

ಕಲಬುರ್ಗಿ: ದರೋಡೆಕೋರನ ಮೇಲೆ ಗುಂಡಿನ ದಾಳಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಲಬುರ್ಗಿ: ದರೋಡೆಕೋರನ ಮೇಲೆ ಗುಂಡಿನ ದಾಳಿ

ಕಲಬುರ್ಗಿ: ನಗರ ಹೊರವಲಯದ ಕೆಸರಟಗಿ ಬಳಿ ದರೋಡೆಕೋರನ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ.

ಇರ್ಫಾನ್ (25)ನ ಕಾಲಿಗೆ ಗುಂಡು ತಗುಲಿದ್ದು, ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಗುರುವಾರ ತಡರಾತ್ರಿ ಇಲ್ಲಿನ ಬಿದ್ದಾಪುರ ಕ್ರಾಸ್ ಬಳಿ ಅಮರ್ ವೈನ್ಸ್ ವ್ಯವಸ್ಥಾಪಕನ ಮೇಲೆ ಹಲ್ಲೆ ಮಾಡಿ ನಗದು, ಮೊಬೈಲ್ ಮತ್ತು ಬೈಕ್ ಕಿತ್ತುಕೊಂಡಿದ್ದರು.

ಇರ್ಫಾನ್ ಜತೆ ಇನ್ನಿಬ್ಬರು ಈ ಕೃತ್ಯದಲ್ಲಿ ಭಾಗಿಯಾಗಿದ್ದು, ಅವರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಶುಕ್ರವಾರ ಬೆಳಿಗ್ಗೆ ದರೋಡೆಕೋರರನ್ನು ಬಂಧಿಸಲು ತೆರಳಿದ್ದ ಫರಹತಾಬಾದ್ ಮತ್ತು ಕಲಬುರ್ಗಿ ಗ್ರಾಮೀಣ ಠಾಣೆ ಪೊಲೀಸರ ಮೇಲೆ ದರೋಡೆಕೋರರು ಇಟ್ಟಿಗೆ ಮತ್ತು ಮಾರಕಾಸ್ತ್ರಗಳಿಂದ ದಾಳಿ ಮಾಡಿದರು. ಈ ವೇಳೆ ಪೊಲೀಸರು ಆತ್ಮರಕ್ಷಣೆಗಾಗಿ ಗುಂಡಿನ ದಾಳಿ ಮಾಡಿದ್ದಾರೆ.

ದರೋಡೆಕೋರರ ಹಲ್ಲೆಯಿಂದ ಪಿಎಸ್‌ಐ ವಾಹಿದ್ ಕೋತ್ವಾಲ್, ಕಾನ್ ಸ್ಟೆಬಲ್‌ಗಳಾದ ಕೇಶವ ಮತ್ತು ಬಾದಷಾ ಅವರಿಗೆ ಸಣ್ಣಪುಟ್ಟ ಗಾಯ ಗಳಾಗಿದ್ದು ಅವರನ್ನು ಬಸವೇಶ್ವರ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸ್ಥಳಕ್ಕೆ ಈಶಾನ್ಯ ವಲಯ ಐಜಿಪಿ ಅಲೋಕಕುಮಾರ್, ಎಸ್ಪಿ ಎನ್.ಶಶಿಕುಮಾರ್ ಭೇಟಿ ನೀಡಿದರು. ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.