7

ಆಯುಷ್ ಚಿಕಿತ್ಸಾ ಪದ್ಧತಿ ಬಡವರ ಕಾಮದೇನು: ಶಾಸಕ

Published:
Updated:

ಕೆ.ಆರ್.ಪೇಟೆ: ಆಯುಷ್ ಚಿಕಿತ್ಸಾ ಪದ್ಧತಿಯು ಬಡಜನರ ಪಾಲಿಗೆ ಸಂಜೀವಿನಿ ಎಂದು ಶಾಸಕ ನಾರಾಯಣಗೌಡ ಹೇಳಿದರು. ತಾಲ್ಲೂಕಿನ ಮಡುವಿನಕೋಡಿ ಗ್ರಾಮದಲ್ಲಿ ಜಿಲ್ಲಾ ಆಯುಷ್ ಇಲಾಖೆ ಮತ್ತು ಜಿಲ್ಲಾ ಪಂಚಾಯಿತಿಯ ಸಹಯೋಗದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಆಯುಷ್ ಚಿಕಿತ್ಸಾ ಶಿಬಿರ ಮತ್ತು ಆರೋಗ್ಯ ತಪಾಸಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಆಯುರ್ವೇದ ಚಿಕಿತ್ಸಾ ಪದ್ಧತಿಗೆ ಭಾರತ ತಾಯಿ ಇದ್ದಂತೆ. ಯುನಾನಿ ಚಿಕಿತ್ಸಾ ಪದ್ಧತಿಯಲ್ಲಿ ವಾಸಿಯಾಗದ ಹಲವಾರು ರೋಗಗಳಿಗೆ ಆಯುಷ್ ಚಿಕಿತ್ಸೆಯು ರಾಮಬಾಣವಾಗಿದ್ದು, ಸಂಪೂರ್ಣವಾಗಿ ಗುಣಮುಖರಾಗಿ ನೆಮ್ಮದಿಯ ಜೀವನವನ್ನು ನಡೆಸಲು ಸಹಕಾರಿಯಾಗಿದೆ ಎಂದರು.

ಜನಸಾಮಾನ್ಯರು ಖಾಸಗಿ ನರ್ಸಿಂಗ್ ಹೋಂಗಳಿಗೆ ಹೋಗಿ ಲಕ್ಷಗಟ್ಟಲೆ ಹಣವನ್ನು ಕಳೆದುಕೊಳ್ಳುವ ಬದಲು ಸಣ್ಣ ಪುಟ್ಟ ಕಾಯಿಲೆಗೆ ಆಯುಷ್ ಚಿಕಿತ್ಸೆ ಪಡೆಯಿರಿ ಎಂದು ಸಲಹೆ ನೀಡಿದರು.

ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಜೆ.ಪ್ರೇಮಕುಮಾರಿ, ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಗಾಯತ್ರಿರೇವಣ್ಣ, ಸದಸ್ಯ ರಾಮದಾಸು, ತಾಲ್ಲೂಕು ಪಂಚಾಯಿತಿ ಉಪಾಧ್ಯಕ್ಷ ಜಾನಕೀರಾಂ, ಸದಸ್ಯರಾದ ಮಾಧವಪ್ರಸಾದ್‌, ಮೋಹನ್, ಮಡುವಿನಕೋಡಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಜಯಮ್ಮ, ಜಿಲ್ಲಾ ಆಯುಷ್ ಅಧಿಕಾರಿ ಪುಷ್ಪಾ ಕೃಷ್ಣಾ, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಚಿಕ್ಕಾಡೆ ಅರವಿಂದ್, ತಾಲ್ಲೂಕು ಆಯುಷ್ ಅಧಿಕಾರಿ ಡಾ.ಲೋಕೇಶ್ ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry