ಗುರುವಾರ , ಮಾರ್ಚ್ 4, 2021
30 °C

ಯೋಗೀಶಗೌಡ ಹತ್ಯೆ ಪ್ರಕರಣ ಸಿಬಿಐಗೆ ವಹಿಸಲ್ಲ: ಸಿದ್ದರಾಮಯ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಯೋಗೀಶಗೌಡ ಹತ್ಯೆ ಪ್ರಕರಣ ಸಿಬಿಐಗೆ ವಹಿಸಲ್ಲ: ಸಿದ್ದರಾಮಯ್ಯ

ಹುಬ್ಬಳ್ಳಿ: ಧಾರವಾಡ ‌ಜಿಲ್ಲಾ ಪಂಚಾಯ್ತಿ ಸದಸ್ಯ ಯೋಗೀಶಗೌಡ ಗೌಡ ಅವರ ಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

ನಗರದ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಆರು ಜನರನ್ನು ಬಂಧಿಸಲಾಗಿದ್ದು, ವಿಚಾರಣೆ ನಡೆಯುತ್ತಿದೆ‌. ಸಚಿವ ವಿನಯ ಕುಲಕರ್ಣಿ ಅವರು ಯಾವುದೆ ತಪ್ಪು ಮಾಡಿಲ್ಲ. ಅವರಿಗೆ ಆಗದವರು ಇಂತಹ ಅಪಪ್ರಚಾರ ನಡೆಸುತ್ತಿದ್ದಾರೆ' ಎಂದು  ಸಮರ್ಥಿಸಿಕೊಂಡರು.

ಮಹದಾಯಿ ಕುರಿತು ವಿವರ ನೀಡಿದ ಅವರು, 'ಯಡಿಯೂರಪ್ಪ ಅವರಿಗೆ ಈಗ ಜ್ಞಾನೋದಯವಾಗಿದ್ದು, 15 ದಿನಗಳಲ್ಲಿ ಮಹದಾಯಿ ವಿವಾದ ಬಗೆಹರಿಸುವುದಾಗಿ ಹೇಳಿದ್ದಾರೆ. ಅವರ ಪ್ರಯತ್ನ ಅವರು‌ ಮಾಡಲಿ. ಆದರೆ ಮೂರು ವರ್ಷಗಳಿಂದ ಏನು ಮಾಡುತ್ತಿದ್ದರು. ಚುನಾವಣೆ ‌ಹತ್ತಿರ ಬಂದಿರುವುದರಿಂದ ಇಂತಹ ಹೇಳಿಕೆ ನೀಡುತ್ತಿದ್ದಾರೆ' ಎಂದರು.

'ನನ್ನನ್ನು ರಾಜಕೀಯವಾಗಿ ಬಚ್ಚಾ ಎಂದ ಯಡಿಯೂರಪ್ಪ ತಾವು ಏನು ಎಂಬುದನ್ನು ‌ಪ್ರಶ್ನಿಸಿಕೊಳ್ಳಲಿ. ಮುಖ್ಯಮಂತ್ರಿಯಾಗಿದ್ದಾಗಲೆ ಜೈಲಿಗೆ ಹೋಗಿ ಬಂದವರು ನನಗೇನು ಹೇಳುತ್ತಾರೆ. ಅವರಿಗೆ ಯಾವ ಸಿದ್ದಾಂತವೂ ಇಲ್ಲ' ಎಂದು ತಿರುಗೇಟು ನೀಡಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.