7

ಕನ್ನಡ ರಕ್ಷಣೆಗೆ ಒಗ್ಗಟ್ಟಿನ ಹೋರಾಟ

Published:
Updated:
ಕನ್ನಡ ರಕ್ಷಣೆಗೆ ಒಗ್ಗಟ್ಟಿನ ಹೋರಾಟ

ಗುಂಡ್ಲುಪೇಟೆ: ‘ಕನ್ನಡ ನೆಲ, ಜಲ, ಭಾಷೆಯ ವಿಚಾರ ಬಂದಾಗ ಎಲ್ಲರೂ ಒಗ್ಗಟಾಗಿ ಹೋರಾಟ ಮಾಡಬೇಕು’ ಎಂದು ಕರ್ನಾಟಕ ಕಾವಲು ಪಡೆಯ ಅಧ್ಯಕ್ಷ ಎಂ. ಮೋಹನಕುಮಾರ್‌ಗೌಡ ಹೇಳಿದರು.

ಪಟ್ಟಣದ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಮುಂಭಾಗದ ಆವರಣದಲ್ಲಿ ಗುರುವಾರ ಕರ್ನಾಟಕ ಕಾವಲು ಪಡೆಯ ಟೌನ್‌ ಘಟಕದಿಂದ ನಡೆದ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಮಾತೃಭಾಷೆಯನ್ನು ಕನ್ನಡಪರ ಸಂಘಟನೆಗಳು ರಕ್ಷಿಸುತ್ತಿವೆ. ಇದಕ್ಕೆ ಸಾರ್ವಜನಿಕರ ಸಹಕಾರ ಅಗತ್ಯ. ಕನ್ನಡ ನಾಡಿನಲ್ಲಿ ಕನ್ನಡ ಭಾಷೆಗೆ ಹೆಚ್ಚಿನ ಮನ್ನಣೆ ಸಿಗಬೇಕು. ಎಲ್ಲ ಸರ್ಕಾರಿ ಮತ್ತು ಖಾಸಗಿ ಕಚೇರಿಗಳಲ್ಲಿ ಕನ್ನಡ ವ್ಯವಹಾರ ಕಡ್ಡಾಯವಾಗಿ ಪಾಲಿಸುವಂತೆ ಸರ್ಕಾರ ಒತ್ತಡ ಹೇರಬೇಕು ಎಂದು ತಿಳಿಸಿದರು. ಕನ್ನಡಕ್ಕಾಗಿ ಹೋರಾಡುತ್ತಿರುವವರನ್ನು ಗುರುತಿಸಿ ಅವರನ್ನು ಗೌರವಿಸಬೇಕು. ಅವರಿಗೆ ಸೌಲಭ್ಯಗಳನ್ನು ಕಲ್ಪಿಸಬೇಕು ಎಂದರು.

ಕಾರ್ಯಕ್ರಮದಲ್ಲಿ ಪುರಸಭೆ ಅಧ್ಯಕ್ಷ ಪಿ. ಗಿರೀಶ್, ಕಾವಲು ಪಡೆಯ ಜಿಲ್ಲಾ ಘಟಕದ ಅಧ್ಯಕ್ಷ ಪರಶಿವಮೂರ್ತಿ, ಟೌನ್ ಅಧ್ಯಕ್ಷ ಅಬ್ದುಲ್ ಮಾಲೀಕ್, ತಾಲ್ಲೂಕು ಅಧ್ಯಕ್ಷ ಮಂಜಪ್ಪ, ಉಪಾಧ್ಯಕ್ಷ ಸಾದಿಕ್‌ಪಾಷಾ, ಕೆ.ಎಸ್‍.ಆರ್‌.ಟಿ.ಸಿ. ನಿರ್ವಾಹಕ ನಟರಾಜು ಹಾಜರಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry