ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೆಬ್ಬಳ್ಳಿಗೆ ನೀರಾವರಿ ಸೌಲಭ್ಯ: ವಿನಯ ಭರವಸೆ

Last Updated 1 ಡಿಸೆಂಬರ್ 2017, 9:11 IST
ಅಕ್ಷರ ಗಾತ್ರ

ಧಾರವಾಡ: ತಾಲ್ಲೂಕಿನ ಹೆಬ್ಬಳ್ಳಿ ಗ್ರಾಮಕ್ಕೆ ಮಲಪ್ರಭಾ ಕಾಲುವೆಯ ಮೂಲಕ ನೀರಾವರಿ ಸೌಲಭ್ಯ ಕಲ್ಪಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ವಿನಯ ಕುಲಕರ್ಣಿ ಹೇಳಿದರು.

ಹೆಬ್ಬಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಅಂಬುಲೆನ್ಸ್ ಕೊಡುಗೆ ನೀಡಿದ ಸಚಿವರನ್ನು ಸನ್ಮಾನಿಸಲು ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.

ಜಿಲ್ಲೆಯ ಸುಮಾರು 13 ತಾಲ್ಲೂಕಿನ ಜನರಿಗೆ ಕುಡಿಯಲು ಮಲಪ್ರಭಾ ನದಿಯಿಂದ ನೀರು ಪೂರೈಸಲಾಗುತ್ತಿದೆ. ನದಿಯಲ್ಲಿ  ನೀರಿನ ಕೊರತೆಯಿಂದ ನವಲಗುಂದ ತಾಲ್ಲೂಕು ಸೇರಿದಂತೆ ಅನೇಕ ತಾಲ್ಲೂಕುಗಳಿಗೆ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯವಾಗುತ್ತಿದೆ. ಸಾಧ್ಯವಾದಷ್ಟು ಈ ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು. 

ಗ್ರಾಮದ ಅಭಿವೃದ್ಧಿಗಾಗಿ ಈಗಾಗಲೇ ಸಾಕಷ್ಟು ಯೋಜನೆಗಳಡಿ ಅನುದಾನ ನೀಡಲಾಗಿದೆ. ಶೇ 90 ರಷ್ಟು ಕಾಮಗಾರಿಗಳು ಮುಕ್ತಾಯ ಹಂತಕ್ಕೆ ಬಂದಿವೆ. ಗ್ರಾಮದ ಹೊಲಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳನ್ನು ಈಗಾಗಲೇ ಡಾಂಬರೀಕರಣ ಮಾಡಲಾಗಿದೆ. ಜೊತೆಗೆ ಗ್ರಾಮದ ಮೂಗ ಬಸವೇಶ್ವರ ಕಲ್ಯಾಣ ಮಂಟಪಕ್ಕೆ ₹ 53 ಲಕ್ಷ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಹೇಳಿದರು.

ಗ್ರಾಮ ಪಂಚಾಯ್ತಿ ಅಧ್ಯಕ್ಷೆ ರತ್ನಮ್ಮಾ ಸುಣಗಾರ ಮಾತನಾಡಿ, ಅಭಿವೃದ್ಧಿ ವಿಷಯದಲ್ಲಿ ರಾಜಕೀಯ ಮಾಡದೇ ಸಚಿವರು ಗ್ರಾಮದಲ್ಲಿ ಅನೇಕ ಅಭಿವೃದ್ಧಿ ಕಾಮಗಾರಿಗಳನ್ನು ಮಾಡುತ್ತಿರುವುದು ಒಳ್ಳೆಯ ಸಂಗತಿ ಎಂದರು.

ತಾಲ್ಲೂಕು ಪಂಚಾಯ್ತಿ ಅಧ್ಯಕ್ಷ ಮಲ್ಲಪ್ಪ ಭಾವಿಕಟ್ಟಿ, ಜಿಲ್ಲಾ ಪಂಚಾಯ್ತಿ ಸದಸ್ಯ ಚನ್ನಬಸಪ್ಪ ಮಟ್ಟಿ, ಗ್ರಾಮ ಪಂಚಾಯ್ತಿ ಉಪಾಧ್ಯಕ್ಷ ರಮೇಶ ಧಾರವಾಡ, ಮುಖಂಡ ಮಹೇಶ ಜೋಶಿ, ಜಿಲ್ಲಾ ಆರೋಗ್ಯಾಧಿಕಾರಿ ಡಾ. ಆರ್‌.ಎಂ. ದೊಡ್ಡಮನಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT