ಗುರುವಾರ , ಮಾರ್ಚ್ 4, 2021
29 °C

ಪ್ರಸಾರ ಭಾರತಿ ಮುಖ್ಯಸ್ಥರಾಗಿ ಎ. ಸೂರ್ಯಪ್ರಕಾಶ್‌ ಮರುನೇಮಕ

ಪಿಟಿಐ Updated:

ಅಕ್ಷರ ಗಾತ್ರ : | |

ಪ್ರಸಾರ ಭಾರತಿ ಮುಖ್ಯಸ್ಥರಾಗಿ ಎ. ಸೂರ್ಯಪ್ರಕಾಶ್‌ ಮರುನೇಮಕ

ನವದೆಹಲಿ: ಹಿರಿಯ ಪತ್ರಕರ್ತ ಹಾಗೂ ‘ಪ್ರಜಾವಾಣಿ’ ಅಂಕಣಕಾರ ಎ.ಸೂರ್ಯಪ್ರಕಾಶ್‌ ಅವರನ್ನು ಪ್ರಸಾರ ಭಾರತಿ ಅಧ್ಯಕ್ಷರಾಗಿ ಸತತ ಎರಡನೇ ಅವಧಿಗೆ ನೇಮಿಸಲಾಗಿದೆ. ಇವರ ಸೇವಾವಧಿ 2020ರ ಫೆಬ್ರುವರಿ 8ರವರೆಗೆ ಇರುತ್ತದೆ.

ಉಪರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ನೇತೃತ್ವದ ಸಮಿತಿಯು ಪ್ರಕಾಶ್‌ ಅವರ ಹೆಸರನ್ನು ಶಿಫಾರಸು ಮಾಡಿತ್ತು. ಅದರ ಅನ್ವಯ, ಸ್ಮೃತಿ ಇರಾನಿ ನೇತೃತ್ವದ ಮಾಹಿತಿ ಹಾಗೂ ಪ್ರಸಾರ ಸಚಿವಾಲಯವು ಶುಕ್ರವಾರ ಆದೇಶ ಪ್ರಕಟಿಸಿದೆ.

ದೂರದರ್ಶನ ಹಾಗೂ ಆಲ್‌ ಇಂಡಿಯಾ ರೇಡಿಯೊ ಕಾರ್ಯನಿರ್ವಹಣೆಯ ಮೇಲುಸ್ತುವಾರಿಯನ್ನು ಪ್ರಸಾರಭಾರತಿ ನೋಡಿಕೊಳ್ಳುತ್ತಿದೆ.

ಮಾಹಿತಿ ಹಾಗೂ ಪ್ರಸಾರ ಖಾತೆ ಇಲಾಖೆಯ ಕಾರ್ಯದರ್ಶಿ ಎನ್‌.ಕೆ.ಸಿನ್ಹಾ, ಪ್ರೆಸ್‌ ಕೌನ್ಸಿಲ್‌ ಆಫ್‌ ಇಂಡಿಯಾದ ಮುಖ್ಯಸ್ಥ ನಿವೃತ್ತ ನ್ಯಾಯಮೂರ್ತಿ ಸಿ.ಕೆ.ಪ್ರಸಾದ್‌ ಸೇರಿದಂತೆ ಇನ್ನಿಬ್ಬರು ಸದಸ್ಯರನ್ನು ಒಳಗೊಂಡ ಸಮಿತಿಯು ಸೂರ್ಯಪ್ರಕಾಶ್‌ ಅವರ ಹೆಸರನ್ನು ಶಿಫಾರಸು ಮಾಡಿತ್ತು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.