ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂವಿಧಾನ: ಎಲ್ಲ ಧರ್ಮದ ಮೂಲ ಗ್ರಂಥ

Last Updated 2 ಡಿಸೆಂಬರ್ 2017, 7:02 IST
ಅಕ್ಷರ ಗಾತ್ರ

ಮುಳಬಾಗಿಲು: ‘ಸಂವಿಧಾನ ಗೌರವಿಸುವುದು ಭಾರತದ ಪ್ರತಿಯೊಬ್ಬ ಪ್ರಜೆಯ ಆದ್ಯ ಕರ್ತವ್ಯವಾಗಿದೆ. ಸಂವಿಧಾನದಲ್ಲಿ ಹೇಳಿರುವ ಅಂಶಗಳನ್ನು ಸರಿಯಾಗಿ ಪಾಲಿಸುವುದರಿಂದ ಸಮಾಜದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಬಹುದು’ ಎಂದು ಹಿರಿಯ ಸಿವಿಲ್ ನ್ಯಾಯಾಧೀಶೆ ಸುಜಾತಾ ಸುವರ್ಣ ಹೇಳಿದರು.

ನಗರದ ನರಸಿಂಹ ತೀರ್ಥದ ಬಳಿ ಇರುವ ವಿದ್ಯಾ ಶಿಕ್ಷಣ ಸಂಸ್ಥೆಯಲ್ಲಿ ತಾಲ್ಲೂಕು ಕಾನೂನು ಸೇವಾ ಸಮಿತಿ ಮತ್ತು ವಕೀಲರ ಸಂಘದ ಸಂಯುಕ್ತ ಆಶ್ರಯದಲ್ಲಿ ಇತ್ತೀಚೆಗೆ ಏರ್ಪಡಿಸಿದ್ದ ಸಂವಿಧಾನ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

‘ಸಂವಿಧಾನ ಒಬ್ಬ ವ್ಯಕ್ತಿ, ಧರ್ಮ, ಜಾತಿಯ ಪರವಾಗಿಲ್ಲ. ಎಲ್ಲರಿಗೂ ಸಮಾನವಾದ ಹಕ್ಕು ಮತ್ತು ಕರ್ತವ್ಯ ಅಳವಡಿಸಿಕೊಳ್ಳುವ ಅವಕಾಶ ಕಲ್ಪಿಸಿಕೊಟ್ಟಿದೆ. ಆದ್ದರಿಂದ ಎಲ್ಲ ಧರ್ಮದವರು ಗೌರವಿಸುವ ಮೂಲ ಗ್ರಂಥ ಭಾರತದ ಸಂವಿಧಾನ. ನಮ್ಮ ದೇಶದ ಸಂವಿಧಾನ ರಚಿಸಲು ಸಾಕಷ್ಟು ಮಹನೀಯರು ಶ್ರಮಿಸಿದ್ದಾರೆ. ನಿಮ್ಮ ಮತ್ತು ನಮ್ಮೆಲ್ಲರ ಒಳಿತಿಗಾಗಿ ರಚನೆಯಾಗಿರುವ ಸಂವಿಧಾನದ ಅಂಶಗಳನ್ನು ಎಲ್ಲರೂ ಪಾಲನೆ ಮಾಡಬೇಕು’ ಎಂದು ಹೇಳಿದರು.

ಪ್ರಧಾನ ಸಿವಿಲ್ ನ್ಯಾಯಾಧೀಶ ಎ.ಎ.ಷಫೀರ್ ಮಾತನಾಡಿ, ‘ಭಾರತದ ಸಂವಿಧಾನ ನಮಗೆ ಹಕ್ಕು ಮತ್ತು ಕರ್ತವ್ಯಗಳೊಂದಿಗೆ ಪ್ರಜಾಪ್ರಭುತ್ವದ ವ್ಯವಸ್ಥೆ ನಿರ್ಮಾಣ ಮಾಡಿಕೊಟ್ಟಿದೆ. ಸಂವಿಧಾನವನ್ನು ಕೇವಲ ನಾವು ನಮ್ಮ ಹಕ್ಕುಗಳನ್ನು ಪಡೆದುಕೊಳ್ಳಲು ಸೀಮಿತಗೊಳಿಸದೆ, ಕರ್ತವ್ಯ ಪಾಲಿಸಲು ಮುಂದಾಗಬೇಕು. ಆಗ ಮಾತ್ರ ಸಂವಿಧಾನಕ್ಕೆ ನಾವು ಗೌರವ ಸಲ್ಲಿಸಿದಂತಾಗುತ್ತದೆ’ ಎಂದರು.

ನಮ್ಮ ಹಕ್ಕುಗಳನ್ನು ಚಲಾಯಿಸುವಾಗ ಕರ್ತವ್ಯಗಳ ಪರಿಕಲ್ಪನೆ ನಮ್ಮ ಮನಸ್ಸಿನಲ್ಲಿರಬೇಕು. ಜೀವನದ ಪ್ರತಿ ಹಂತದಲ್ಲೂ ನಾವು ನಮ್ಮ ಕರ್ತವ್ಯಗಳನ್ನು ಮೈಗೂಡಿಸಿಕೊಂಡು ಭಾರತದ ಪ್ರಜೆಯಾಗಿ ಅರ್ಥಪೂರ್ಣ ಜೀವನ ನಡೆಸಬೇಕು. ವಿದ್ಯಾರ್ಥಿಗಳು ತಮ್ಮ ವಿದ್ಯಾರ್ಥಿ ದೆಸೆಯಿಂದಲೇ ಸಂವಿಧಾನವನ್ನು ಕೈಪಿಡಿಯಂತೆ ಮಾಡಿಕೊಂಡು ಕಾನೂನು ಸುವ್ಯವಸ್ಥೆ ಕಾಪಾಡಲು ಮುಂದಾಗಬೇಕು ಎಂದು ಸಲಹೆ ನೀಡಿದರು.

ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಎಚ್.ಪಿ.ಮೋಹನ್ ಕುಮಾರ್ ಮಾತನಾಡಿ, ‘ಭಾರತದ ಸಂವಿಧಾನ ನಮಗೆ ಮೂಲಭೂತ ಹಕ್ಕುಗಳನ್ನು ಒದಗಿಸಿದೆ. ಮನಸೋ ಇಚ್ಛೆ ಹಕ್ಕುಗಳನ್ನು ಚಲಾಯಿಸದೇ, ಕಾನೂನು ಚೌಕಟ್ಟಿಗೆ ಒಳಪಟ್ಟಂತೆ ಚಲಾಯಿಸಬೇಕು’ ಎಂದು ಹೇಳಿದರು.

ಭಾರತದ ಸಂವಿಧಾನದ ಪೀಠಿಕೆ ಬಗ್ಗೆ ಹಿರಿಯ ವಕೀಲ ಎಂ.ಎಸ್.ಶ್ರೀನಿವಾಸರೆಡ್ಡಿ ಹಾಗೂ ಕರ್ತವ್ಯಗಳ ಬಗ್ಗೆ ವಕೀಲ ಪಿ.ರಾಜು ವಿಶೇಷ ಉಪನ್ಯಾಸ ನೀಡಿದರು. ವಕೀಲರಾದ ಶೇಖರ್, ಧರ್ಮರಾಜ್, ಜಯಪ್ಪ, ಸಂತೋಷ್, ನೂರ್ ಪರ್ವೀನ್, ರಮೇಶ್, ಪೂಜಾರಿ, ದುರ್ಗ ಪ್ರಸಾದ್, ಎಸ್.ಕೆ.ಮಂಜುನಾಥ್, ಜಯರಾಮ್, ರಾಧಿಕಾ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT