ಶುಕ್ರವಾರ, ಮಾರ್ಚ್ 5, 2021
29 °C

ಒಖಿ ಚಂಡಮಾರುತದಿಂದ ಹಾನಿ: ನೆರವು ನೀಡಲು ತಮಿಳುನಾಡಿಗೆ ಕೇಂದ್ರದ ಭರವಸೆ

ಏಜೆನ್ಸಿಸ್‌ Updated:

ಅಕ್ಷರ ಗಾತ್ರ : | |

ಒಖಿ ಚಂಡಮಾರುತದಿಂದ ಹಾನಿ: ನೆರವು ನೀಡಲು ತಮಿಳುನಾಡಿಗೆ ಕೇಂದ್ರದ ಭರವಸೆ

ಚೆನ್ನೈ: ಒಖಿ ಚಂಡಮಾರುತದಿಂದ ಕನ್ಯಾಕುಮಾರಿ ಮತ್ತು ತಿರುನೆಲ್ವೇಲಿ ಜಿಲ್ಲೆಗಳಲ್ಲಿ ಆಗಿರುವ ಹಾನಿಯ ಪರಿಹಾರ ಕಾರ್ಯಗಳಿಗಾಗಿ ಕೇಂದ್ರ ಸರ್ಕಾರದ ನೆರವು ಕೋರಲು ತಮಿಳುನಾಡು ಸರ್ಕಾರ ಮುಂದಾಗಿದೆ.

ಶುಕ್ರವಾರ ತಡರಾತ್ರಿ ಪ್ರಧಾನಿ ನರೇಂದ್ರ ಮೋದಿ ತಮಿಳುನಾಡಿನ ಮುಖ್ಯಮಂತ್ರಿ ಕೆ.ಪಳನಿಸ್ವಾಮಿ ಜತೆ ಮಾತುಕತೆ ನಡೆಸಿದ್ದು, ಹಾನಿಯ ಕುರಿತು ಸಂಕ್ಷಿಪ್ತ ಮಾಹಿತಿ ಪಡೆದಿದ್ದಾರೆ. ಅಗತ್ಯ ನೆರವು ನೀಡುವುದಾಗಿ ಪ್ರಧಾನಿ ಭರವಸೆ ನೀಡಿದ್ದಾಗಿ ಮುಖ್ಯಮಂತ್ರಿ ಕಚೇರಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ವಿಪತ್ತು ನಿರ್ವಹಣೆಗೆ ರಾಜ್ಯ ಸರ್ಕಾರ ಕೈಗೊಂಡಿರುವ ಕ್ರಮಗಳು ಹಾಗೂ ಅವುಗಳನ್ನು ತ್ವರಿತವಾಗಿ ಜಾರಿ ಮಾಡಲು ಹಿರಿಯ ಸಚಿವರು ಹಾಗೂ ಐಎಎಸ್‌ ಅಧಿಕಾರಿಗಳನ್ನು ನಿಯೋಜಿಸಿರುವ ಕುರಿತು ಪಳನಿಸ್ವಾಮಿ ಪ್ರಧಾನಿಗೆ ವಿವರಿಸಿದ್ದಾರೆ.

ಕಡಿತಗೊಂಡಿರುವ ವಿದ್ಯುತ್‌ ಸಂಪರ್ಕ ಸರಿಪಡಿಸಲು ಮತ್ತು ಕಾಣೆಯಾಗಿರುವ ಮೀನುಗಾರರನ್ನು ಪತ್ತೆ ಮಾಡಲು ತ್ವರಿತ ಕಾರ್ಯಾಚರಣೆ ನಡೆದಿರುವುದಾಗಿ ತಿಳಿಸಿದ್ದು, ಹಾನಿಯ ಸಂಪೂರ್ಣ ವರದಿಯನ್ನು ಕೇಂದ್ರಕ್ಕೆ ಸಲ್ಲಿಸುವುದಾಗಿ ಪ್ರಕಟಣೆ ತಿಳಿಸಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.