ಪಿಡಿಪಿ ಅಧ್ಯಕ್ಷೆಯಾಗಿ ಸತತ 6ನೇ ಬಾರಿ ಆಯ್ಕೆಯಾದ ಮೆಹಬೂಬಾ ಮುಫ್ತಿ

ಶ್ರೀನಗರ: ಜಮ್ಮು ಕಾಶ್ಮೀರ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಅವರು ಪೀಪಲ್ಸ್ ಡೆಮಾಕ್ರೆಟಿಕ್ ಪಕ್ಷದ(ಪಿಡಿಪಿ) ಅಧ್ಯಕ್ಷೆಯಾಗಿ ಮರು ಆಯ್ಕೆಯಾಗಿದ್ದಾರೆ. ಈ ಮೂಲಕ ಸತತ ಆರನೇ ಬಾರಿಗೆ ಪಕ್ಷದ ಉನ್ನತ ಹುದ್ದೆಯನ್ನು ಅಲಂಕರಿಸಲಿದ್ದಾರೆ.
ತಮ್ಮನ್ನು ಮರು ಆಯ್ಕೆ ಮಾಡಿರುವುದಕ್ಕೆ ಹರ್ಷ ವ್ಯಕ್ತಪಡಿಸಿರುವ ಮುಫ್ತಿ, ಪಕ್ಷದ ನಾಯಕರಿಗೆ ಧನ್ಯವಾದ ಅರ್ಪಿಸಿದ್ದಾರೆ. ಜತೆಗೆ ಜಮ್ಮ ಕಾಶ್ಮೀರದಲ್ಲಿ ಅಭಿವೃದ್ಧಿ, ಸಹಕಾರ ಮತ್ತು ಸಮನ್ವಯತೆ ಸಾಧಿಸಲು ದಣಿವರಿಯದೆ ಶ್ರಮಿಸಲಿದ್ದೇವೆ ಎಂದು ತಮ್ಮ ಟ್ವಿಟರ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.