ಮಂಗಳವಾರ, ಮಾರ್ಚ್ 2, 2021
24 °C

ಆತಂಕ ಮೂಡಿಸಿದ್ದ ಚಿರತೆ ಸೆರೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಆತಂಕ ಮೂಡಿಸಿದ್ದ ಚಿರತೆ ಸೆರೆ

ನಾಗಮಂಗಲ: ಬೆಳ್ಳೂರು ಹೋಬಳಿ ಸೂರನಹಳ್ಳಿ ಗ್ರಾಮದ ಸುತ್ತಮುತ್ತಲಿನ ಜನರಲ್ಲಿ ಆತಂಕ ಸೃಷ್ಟಿಸಿದ್ದ ಚಿರತೆಯನ್ನು ಶನಿವಾರ ಅರಣ್ಯ ಇಲಾಖೆಯ ಅಧಿಕಾರಿಗಳು ಸೆರೆ ಹಿಡಿದಿದ್ದಾರೆ.

ದೊಡ್ಡಘಟ್ಟ ಗ್ರಾಮದ‌ಲ್ಲಿ ಇಟ್ಟಿದ್ದ ಬೋನಿನಲ್ಲಿ ಚಿರತೆ ಸೆರೆಯಾಗಿದೆ. ಸ್ಥಳಕ್ಕೆ ಬಂದ ವಲಯ ಅರಣ್ಯಾಧಿಕಾರಿ ಪ್ರಶಾಂತ್ ಹಾಗೂ ಸಿಬ್ಬಂದಿ ಪರಿಶೀಲಿಸಿದರು. ಬಳಿಕ ಮುತ್ತತ್ತಿ ಅರಣ್ಯ ಪ್ರದೇಶದಲ್ಲಿ ಬಿಡಲಾಯಿತು. ಸೂರನಹಳ್ಳಿ, ಗೋವಿಂದಘಟ್ಟ, ದೊಡ್ಡಾಘಟ್ಟ ಗ್ರಾಮಸ್ಥರಲ್ಲಿ ಆತಂಕ ಮೂಡಿಸಿತ್ತು.

ಕರು ಬಲಿ: ಕೆ.ಆರ್.ಪೇಟೆ ತಾಲ್ಲೂಕಿನ ಕಿಕ್ಕೇರಿ ಹೋಬಳಿಯ ರಾಮನಹಳ್ಳಿ ಗ್ರಾಮದಲ್ಲಿ ಶನಿವಾರ ಮುಂಜಾನೆ ಚಿರತೆ ದಾಳಿ ಮಾಡಿ ಎಮ್ಮೆ ಕರುವನ್ನು ಕೊಂದಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.