ನೆಲಮಂಗಲ: ಪಟ್ಟಣ ಸಮೀಪದ ಸೊಂಡೆಕೊಪ್ಪ ರಸ್ತೆಯ ಬಯಲು ಉದ್ಭವ ವಿನಾಯಕ ಸ್ವಾಮಿಯ ಬ್ರಹ್ಮ ರಥೋತ್ಸವ (ಕಡಲೆ ಕಾಯಿ ಪರಿಷೆ) ಭಾನುವಾರ ವಿಜೃಂಭಣೆಯಿಂದ ನಡೆಯಲಿದೆ.

ಈ ರಥೋತ್ಸವವು ಕಡಲೆಕಾಯಿ ಪರಿಷೆ ಎಂದೆ ಹೆಸರುವಾಸಿ. ಸುತ್ತಮುತ್ತಲ ಜಿಲ್ಲೆಗಳಿಂದ ಸಾವಿರಾರು ಭಕ್ತರು ರಥೋತ್ಸವದಲ್ಲಿ ಪಾಲ್ಗೊಳ್ಳುತ್ತಾರೆ. ಪರಿಷೆ ಪ್ರಯುಕ್ತ 2 ಕಿ.ಮೀ. ದೂರದವರೆಗೂ ರಸ್ತೆಯ ಅಕ್ಕಪಕ್ಕದಲ್ಲಿ ಅಂಗಡಿ ಮುಂಗಟ್ಟು ತಲೆಎತ್ತುತ್ತವೆ.

ಒಂದು ವಾರದಿಂದ ಸಿದ್ಧತಾ ಕಾರ್ಯ ಭರದಿಂದ ಸಾಗಿದೆ. ಭಾನುವಾರ ಮಧ್ಯಾಹ್ನ 1:15ರಿಂದ 1.45 ಗಂಟೆಗೆ ಸಲ್ಲುವ ಶುಭ ಮೀನ ಲಗ್ನದಲ್ಲಿ ರಥೋತ್ಸವ ನಡೆಯಲಿದೆ. ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಲಾಗಿದೆ ಎಂದು ದೇವಸ್ಥಾನ ಸಮಿತಿ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.