ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯುವಜನರು ಗ್ರಾಮೀಣ ಕಲೆ ಉಳಿಸಬೇಕು

Last Updated 3 ಡಿಸೆಂಬರ್ 2017, 5:24 IST
ಅಕ್ಷರ ಗಾತ್ರ

ಉಡುಪಿ: ಗ್ರಾಮೀಣ ಭಾಗದ ಜಾನಪದ ಕಲೆಯನ್ನು ಉಳಿಸುವಲ್ಲಿ ಯುವಜನೋತ್ಸವ ಕಾರ್ಯಕ್ರಮ ಸಹಕಾರಿ ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷ ದಿನಕರ ಬಾಬು ತಿಳಿಸಿದರು. ರಾಜ್ಯ ಯುವಜನ ಸಂಘಗಳ ಒಕ್ಕೂಟ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಬೆಂಗಳೂರು ಜಿಲ್ಲಾ ಯುವ ಸಂಘಗಳ ಒಕ್ಕೂಟದ ಸಹಯೋಗದಲ್ಲಿ ಶನಿವಾರ ನಗರದಲ್ಲಿ ಆಯೋಜಿಸಿದ್ದ ರಾಜ್ಯ ಮಟ್ಟದ ಯುವಜನೋತ್ಸವ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು. ಗ್ರಾಮೀಣ ಭಾಗದ ಕಲೆ ಮತ್ತು ಸಂಸ್ಕೃತಿಯನ್ನು ಉಳಿಸಿ ಮುಂದಿನ ಪೀಳಿಗೆ ತಲುಪಿಸಲು ಯುವ ಜನತೆ ಮುಂದೆ ಬರಬೇಕು ಎಂದರು.

ನಮ್ಮ ಸಂಸ್ಕೃತಿಯನ್ನು ಮುಂದಿನ ಪೀಳಿಗೆ ತಲುಪಿಸದೆ ಹೋದರೆ ಅಮೂಲ್ಯವಾದ ಕಲಾ ಸಂಪತ್ತು ನಶಿಸಿ ಹೋಗುತ್ತದೆ ಎಂದು ಕ್ರೀಡಾ ಇಲಾಖೆಯ ಜಂಟಿ ನಿರ್ದೇಶಕ ಅಭಿಜಿನ್‌ ಹೇಳಿದರು.

ಜನಪದ ಹಾಡು, ಏಕಾಂಕ ನಾಟಕ, ಆಶುಭಾಷಣ, ಶಾಸ್ತ್ರೀಯ ನೃತ್ಯ, ಶಾಸ್ತ್ರೀಯ ಗಾಯನ, ಹಾರ್ಮೋನಿಯಂ ಮತ್ತು ಗಿಟಾರ್‌ ವಾದನ ಸ್ಪರ್ಧೆಯಲ್ಲಿ ನೂರಾರು ಸ್ಪರ್ಧಿಗಳು ಭಾಗವಹಿಸಿದ್ದರು. ವಿಜೇತರಾದವರು ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸುತ್ತಾರೆ.

ನಗರ ಸಭೆ ಅಧ್ಯಕ್ಷೆ ಮೀನಾಕ್ಷಿ ಮಾಧವಾ ಬನ್ನಂಜೆ, ಕ್ರೀಡಾ ಇಲಾಖೆಯ ಜಂಟಿ ನಿರ್ದೇಶಕ ರಂಗಯ್ಯ, ಡಾ. ಜಿ. ಶಂಕರ್ ಮಹಿಳಾ ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಪ್ರಾಂಶುಪಾಲ ಬಿ. ಜಗದೀಶ್ ಇದ್ದರು. ಡಾ.ರೋಶನ್ ಕುಮಾರ್ ಶೆಟ್ಟಿ ಸ್ವಾಗತಿಸಿದರು. ಪ್ರಕಾಶ್ ಕ್ರಮಧಾರಿ ಕಾರ್ಯಕ್ರಮ ನಿರೂಪಿಸಿದರು.

ವಯೋಮಿತಿ ದಾಟಿದವರಿಗೆ ಅವಕಾಶ ನೀಡಿಲ್ಲ
ರಾಜ್ಯ ಮಟ್ಟದ ಯುವಜನೋತ್ಸವಕ್ಕೆ ರಾಜ್ಯದ 30 ಜಿಲ್ಲೆಗಳಿಂದ ನೂರಾರು ಜನರು ಭಾಗವಹಿಸಿದ್ದಾರೆ. 29ವರ್ಷದೊಳಗಿನವರಿಗೆ ಸ್ಪರ್ಧೆಯಲ್ಲಿ ಭಾಗವಹಿಸಬೇಕು ಎಂದು ಇಲಾಖೆಯಿಂದ ಆದೇಶ ಬಂದಿತ್ತು. ಆದ್ದರಿಂದ ಇಲ್ಲಿಗೆ ಬಂದಿರುವ ಶೇ40ರಷ್ಟು ಮಂದಿ ವಯೋಮಿತಿ ದಾಟಿದವರಿಗೆ ಅವಕಾಶ ನೀಡಿಲ್ಲ ಎಂದು ಕ್ರೀಡೆ ಮತ್ತು ಯುವ ಸಬಲೀಕರಣ ಇಲಾಖೆಯ ಸಹಾಯಕ ನಿರ್ದೇಶಕ ಡಾ.ರೋಶನ್ ಕುಮಾರ್ ಶೆಟ್ಟಿ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT