ಸೋಮವಾರ, ಮಾರ್ಚ್ 1, 2021
31 °C

ಬಿಜೆಪಿ ಪರಿವರ್ತನಾ ಯಾತ್ರೆ ಜಿಲ್ಲೆ ಪ್ರವೇಶ ಇಂದು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬಿಜೆಪಿ ಪರಿವರ್ತನಾ ಯಾತ್ರೆ ಜಿಲ್ಲೆ ಪ್ರವೇಶ ಇಂದು

ಕಲಬುರ್ಗಿ: ನವ ಕರ್ನಾಟಕ ನಿರ್ಮಾಣಕ್ಕಾಗಿ ಬಿಜೆಪಿ ಹಮ್ಮಿಕೊಂಡಿರುವ 'ಪರಿವರ್ತನಾ ಯಾತ್ರೆ'ಯು ಅಫಜಲಪುರ ಮೂಲಕ ಭಾನುವಾರ ಜಿಲ್ಲೆ ಪ್ರವೇಶಿಸಲಿದೆ.

ಮಧ್ಯಾಹ್ನ 3 ಗಂಟೆಗೆ ಅಫಜಲಪುರದ ಮಹಾಂತೇಶ್ವರ ವಿದ್ಯಾವರ್ಧಕ ಸಂಘದ ಶಾಲಾ ಆವರಣದಲ್ಲಿ ಹಾಗೂ ಸಂಜೆ 6 ಗಂಟೆಗೆ ಆಳಂದ ಪಟ್ಟಣದ ಶ್ರೀರಾಮ ಮಾರುಕಟ್ಟೆ ಮೈದಾನದಲ್ಲಿ 'ಪರಿವರ್ತನಾ ಯಾತ್ರೆ' ಜರುಗಲಿದೆ.

ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಕೇಂದ್ರ ಸಚಿವರು ಹಾಗೂ ರಾಜ್ಯದ ಪ್ರಮುಖ ನಾಯಕರು ಭಾಗವಹಿಸುವರು.

ಡಿ.4ರಂದು ಬೆಳಿಗ್ಗೆ 11 ಗಂಟೆಗೆ ಕಲಬುರ್ಗಿ ತಾಲ್ಲೂಕಿನ ಕಮಲಾಪುರದಲ್ಲಿ ಬಹಿರಂಗ ಸಮಾವೇಶ ಜರುಗಲಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.