6

ತುಳಿತಕ್ಕೊಳಗಾದ ಮಹಿಳೆಯರಿಗೆ ಬೆಂಬಲಿಸುವುದು ಅಗತ್ಯ

Published:
Updated:

ಕಲಬುರ್ಗಿ: ಹೆಣ್ಣು ಮಕ್ಕಳು ಎಲ್ಲ ರಂಗದಲ್ಲಿ ಮುಂದೆ ಬರಬೇಕು ಗ್ರಾಮ ಪಂಚಾಯಿತಿ ಚುನಾಯಿತ ಪ್ರತಿನಿಧಿಗಳು ತುಳಿತಕ್ಕೊಳಗಾದ ಮಹಿಳೆಯರಿಗೆ ಹೆಚ್ಚಿನ ರೀತಿಯಲ್ಲಿ ಪ್ರೋತ್ಸಾಹಿಸಿ ಅವರನ್ನು ಮುಂದೆತರಬೇಕು ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಸುವರ್ಣಾ ಮಲಾಜಿ ಹೇಳಿದರು.

ಇಲ್ಲಿನ ಬಾಲಭವನದಲ್ಲಿ ಮಾರ್ಗದರ್ಶಿ ಸಂಸ್ಥೆ, ದಿ ಹಂಗರ ಪ್ರೊಜೆಕ್ಷ್ ಆಶ್ರಯದಲ್ಲಿ ಈಚೆಗೆ ಜಿಲ್ಲಾ ಮಟ್ಟದ ಗ್ರಾಮ ಪಂಚಾಯಿತಿ ಮಹಿಳಾ ಪ್ರತಿನಿಧಿಗಳು ಹಾಗೂ ಅಧಿಕಾರಿಗಳೊಂದಿಗೆ ಸಂವಾದ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

20ಗ್ರಾಮ ಪಂಚಾಯಿತಿಗಳ ಮಹಿಳೆಯರ ಸಮಸ್ಯೆಗಳನ್ನು ಚರ್ಚಿಸಿ ಕೆಲವು ತೀರ್ಮಾನಗಳನ್ನು ತೆಗೆದುಕೊಂಡರು. ಕೇಲವು ಗ್ರಾಮ ಪಂಚಾಯಿತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ, ರಸ್ತೆ ಸಮಸ್ಯೆ, ನಾಲಿಗಳ ಸಮಸ್ಯೆ, ಮಾಸಿಕ ಸಭೆ ಸೇರಿದಂತೆ ಹಲವು ಸಮಸ್ಯೆಗಳ ಬಗ್ಗೆ ಚರ್ಚಿಸಿ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

ಸುಗ್ರಾಮದ ಜಿಲ್ಲಾ ಅಧ್ಯಕ್ಷೆ ಫರವಿನಾ ಬೇಗಂ ಮಾತನಾಡಿ, ಸುಗ್ರಾಮ ಸಂಘಟನೆಯ ಮೂಲಕ ನಾವೆಲ್ಲರೂ ಒಂದಾಗಿ ಗ್ರಾಮ ಪಂಚಾಯಿತಿ ಚುನಾಯಿತಿ ಮಹಿಳಾ ಪ್ರತಿನಿಧಿಗಳನ್ನು ಸಬಲೀಕರಣಗೊಳಿಸೊಣ ಎಂದು ಹೇಳಿದರು. ಮಾರ್ಗದರ್ಶಿ ಸಂಸ್ಥೆ ನಿರ್ದೇಶಕ ಆನಂದರಾಜ್‌ ಮಾತನಾಡಿದರು. ಜಿಲ್ಲಾ ಸಂಯೋಜಕ ಶ್ರೀನಿವಾಸ ಕುಲಕರ್ಣಿ, ವಿವಿಧ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಸದಸ್ಯರು ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry