ಗುರುವಾರ , ಫೆಬ್ರವರಿ 25, 2021
30 °C

ರಾಹುಲ್‌ ಗಾಂಧಿ ನಾಮಪತ್ರ ಸಲ್ಲಿಕೆ ಇಂದು

ಪಿಟಿಐ Updated:

ಅಕ್ಷರ ಗಾತ್ರ : | |

ರಾಹುಲ್‌ ಗಾಂಧಿ ನಾಮಪತ್ರ ಸಲ್ಲಿಕೆ ಇಂದು

ನವದೆಹಲಿ: 132 ವರ್ಷಗಳ ಇತಿಹಾಸ ಹೊಂದಿರುವ ಕಾಂಗ್ರೆಸ್‌ ಪಕ್ಷದ ಅಧ್ಯಕ್ಷ ಸ್ಥಾನಕ್ಕಾಗಿ ಉಪಾಧ್ಯಕ್ಷ ರಾಹುಲ್‌ ಗಾಂಧಿ ಸೋಮವಾರ ನಾಮಪತ್ರ ಸಲ್ಲಿಸಲಿದ್ದಾರೆ.

ಕಾಂಗ್ರೆಸ್‌ನ  ಕಾರ್ಯಕಾರಿ ಸಮಿತಿಯ (ಸಿಡಬ್ಲ್ಯುಸಿ) ಮುಖಂಡರು, ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಪಕ್ಷದ ಇತರ ಮುಖ್ಯಮಂತ್ರಿಗಳಾದ ಅಮರೀಂದರ್‌ ಸಿಂಗ್‌, ವಿ.ನಾರಾಯಣ ಸ್ವಾಮಿ, ವಿವಿಧ ರಾಜ್ಯಗಳ ಕಾಂಗ್ರೆಸ್‌ ಅಧ್ಯಕ್ಷರು ಮತ್ತು ಪಕ್ಷದ ಹಲವು ಮುಖಂಡರು ಸೋಮವಾರ ಎಐಸಿಸಿ ಪ್ರಧಾನ ಕಚೇರಿಯಲ್ಲಿ ಸೇರಿ ರಾಹುಲ್‌ ಪರವಾಗಿ ನಾಮಪತ್ರಗಳನ್ನು ಸಲ್ಲಿಸಲಿದ್ದಾರೆ.

ಒಂದು ವೇಳೆ ಅವರ ವಿರುದ್ಧ ಯಾರೂ ಸ್ಪರ್ಧಿಸದಿದ್ದರೆ, ಡಿಸೆಂಬರ್‌ 11ರಂದು ಅವರ ಆಯ್ಕೆಯನ್ನು ಅಧಿಕೃತವಾಗಿ ಘೋಷಿಸುವ ಸಾಧ್ಯತೆ ಇದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.