ಸೋಮವಾರ, ಮಾರ್ಚ್ 1, 2021
25 °C

2025ರ ವೇಳೆಗೆ 1 ಲಕ್ಷ ಸ್ಟಾರ್ಟ್‌ಅಪ್‌ಗಳು: ಪೈ

ಪಿಟಿಐ Updated:

ಅಕ್ಷರ ಗಾತ್ರ : | |

2025ರ ವೇಳೆಗೆ 1 ಲಕ್ಷ ಸ್ಟಾರ್ಟ್‌ಅಪ್‌ಗಳು: ಪೈ

ಉದಯಪುರ: ‘ಮುಂದಿನ ಏಳೆಂಟು ವರ್ಷಗಳಲ್ಲಿ ದೇಶದಲ್ಲಿ ಒಂದು ಲಕ್ಷ ಸ್ಟಾರ್ಟ್‌ಅಪ್‌ಗಳು (ನವೋದ್ಯಮ) ಅಸ್ತಿತ್ವಕ್ಕೆ ಬರಲಿವೆ’ ಎಂದು ಮಣಿಪಾಲ್‌ ಗ್ಲೋಬಲ್‌ ಎಜುಕೇಷನ್‌ ಅಧ್ಯಕ್ಷ ಟಿ. ವಿ. ಮೋಹನದಾಸ್‌ ಪೈ ಅವರು ಹೇಳಿದ್ದಾರೆ.

‘2025ರ ವೇಳೆಗೆ ದೇಶದಾದ್ಯಂತ ನವೋದ್ಯಮಗಳ ಸಂಖ್ಯೆ 1 ಲಕ್ಷಕ್ಕೆ ತಲುಪಲಿದೆ ಎನ್ನುವುದು ನನ್ನ ನಿರೀಕ್ಷೆಯಾಗಿದೆ. ಇದರಿಂದ  32.5 ಲಕ್ಷ ಜನರಿಗೆ ಉದ್ಯೋಗ ಅವಕಾಶಗಳು ದೊರೆಯಲಿವೆ. ₹ 32.50 ಲಕ್ಷ ಕೋಟಿಗಳಷ್ಟು ಸಂಪತ್ತು ಸೃಷ್ಟಿಯಾಗಲಿದೆ. ಹೂಡಿಕೆದಾರರೂ ಸಾಕಷ್ಟು ಲಾಭ ಮಾಡಿಕೊಳ್ಳಲಿದ್ದಾರೆ’ ಎಂದು ಅವರು ತಿಳಿಸಿದ್ದಾರೆ. ಇಲ್ಲಿ ನಡೆದ ರಾಜಸ್ಥಾನ ಡಿಜಿಫೆಸ್ಟ್‌ನಲ್ಲಿ ಭಾಗವಹಿಸಿದ್ದ ಅವರು ಸುದ್ದಿಸಂಸ್ಥೆ ಜತೆ ಮಾತನಾಡುತ್ತಿದ್ದರು.

‘ಯುವ ಸಮುದಾಯವು ತಂತ್ರಜ್ಞಾನದ ನೆರವಿನಿಂದ ಪ್ರಮುಖ ಸವಾಲುಗಳಿಗೆ ಪರಿಹಾರ ಕಂಡುಕೊಳ್ಳುತ್ತಿದೆ. ಯುವ ಜನತೆಯ ಇಂತಹ ತಂತ್ರಜ್ಞಾನ ಆಧಾರಿತ ನವೋದ್ಯಮಗಳು ಭಾರತವನ್ನು ಬದಲಿಸಲಿದೆ. ಶಿಕ್ಷಣ, ಆರೋಗ್ಯ, ಇ–ಕಾಮರ್ಸ್‌ ಕ್ಷೇತ್ರಗಳಲ್ಲಿ ಇದರ ಪರಿಣಾಮಗಳು ಈಗಾಗಲೇ ಕಂಡು ಬಂದಿದೆ. ಸ್ಟಾರ್ಟ್‌ಅಪ್‌ಗಳ ಸ್ಥಾಪನೆ ವಿಷಯದಲ್ಲಿ ಭಾರತವು ಅಮೆರಿಕ ಮತ್ತು ಚೀನಾ ನಂತರದ ಮೂರನೇ ಸ್ಥಾನದಲ್ಲಿ ಇರಲಿದೆ’ ಎಂದೂ ಪೈ ಹೇಳಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.