7

ಅಭ್ಯರ್ಥಿ ನಾನೇ, ಗೊಂದಲಬೇಡ–ಸೋಮಶೇಖರ್

Published:
Updated:

ಮಳವಳ್ಳಿ: ‘ಮುಂದಿನ ಚುನಾವಣೆಯಲ್ಲಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ನಾನೇ ಸ್ಪರ್ಧಿಸಲಿದ್ದು, ಈ ಬಗ್ಗೆ ಗೊಂದಲಬೇಡ’ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ಸೋಮಶೇಖರ್ ತಿಳಿಸಿದರು.

ತಾಲ್ಲೂಕಿನ ಚಿಲ್ಲಾಪುರ ಗ್ರಾಮದ ಸಿದ್ದಪ್ಪಾಜಿ ದೇವಸ್ಥಾನದ ಆವರಣದಲ್ಲಿ ಭಾನುವಾರ ನಡೆದ ಬಿಜೆಪಿ ಪರಿಶಿಷ್ಟ ಜಾತಿಯ ಕಾರ್ಯಕರ್ತರ ಚಿಂತನ ಮಂಥನ ಸಭೆಯಲ್ಲಿ ಮಾತನಾಡಿದರು.

ಮಳವಳ್ಳಿ ಕ್ಷೇತ್ರದಲ್ಲಿ ಜೆಡಿಎಸ್-ಕಾಂಗ್ರೆಸ್ ಅಭ್ಯರ್ಥಿಗಳು ಆಯ್ಕೆಯಾಗುತ್ತಿದ್ದಾರೆ. ನಾನು ನಾಲ್ಕು ಸಾರಿ ಗೆದ್ದು, ಮೂರುಬಾರಿ ಸೋತಿದ್ದೇನೆ. ಕ್ಷೇತ್ರದಲ್ಲಿಯೇ ಸ್ಪರ್ಧಿಸಲು ರಾಜಕೀಯ ಸಮಾಜಸೇವೆಗೆ ಈ ಕ್ಷೇತ್ರದಲ್ಲಿಯೇ ಕೊನೆ ಹಾಡಬೇಕು ಎಂಬುದಾಗಿದೆ ಎಂದು ಹೇಳಿದರು.

ಚಾಮರಾಜನಗರ ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಸರ್ವೇಶ್, ‘ಬಿ.ಸೋಮಶೇಖರ್ ಭ್ರಷ್ಟಚಾರವಿಲ್ಲದೆ ನಿಷ್ಟಾವಂತರಾಗಿ ಸಮಾಜ ಸೇವೆ ಸಲ್ಲಿಸಿದ್ದಾರೆ. ಇಂಥವರಿಗೆ ದಲಿತ ಸಮೂಹ ಬೆಂಬಲಿಸಬೇಕು ಎಂದರು.

ತಾಲ್ಲೂಕು ಬಿಜೆಪಿ ಘಟಕದ ಅಧ್ಯಕ್ಷ ಎಚ್.ಎಂ.ಶಿವಸ್ವಾಮಿ, ಬಸವೇಗೌಡ, ಪ್ರಧಾನ ಕಾರ್ಯದರ್ಶಿಗಳಾದ ಕುಮಾರ್, ಅಶೋಕ್, ಜಿಲ್ಲಾ ಎಸ್ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಚಿಕ್ಕಣ್ಣ, ತಾಪಂ ಮಾಜಿ ಅಧ್ಯಕ್ಷ ಸಿದ್ದಲಿಂಗಸ್ವಾಮಿ, ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಶಿವಲಿಂಗಯ್ಯ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಪುಟ್ಟಸಿದ್ದೇಗೌಡ, ಗ್ರಾಪಂ ಸದಸ್ಯ ಸಿ.ರಾಮು, ಮುಖಂಡರಾದ ಪುಟ್ಟರಂಗಯ್ಯ, ಚಿಕ್ಕಸಿದ್ದಯ್ಯ, ಉಮಾ, ವೇದಾವತಿ, ನಂದಕುಮಾರ್ ಉಪಸ್ಥಿತರಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry