ಶುಕ್ರವಾರ, ಮಾರ್ಚ್ 5, 2021
29 °C

ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಹುಲ್‌ ನಾಮಪತ್ರ ಸಲ್ಲಿಕೆ

ಪಿಟಿಐ Updated:

ಅಕ್ಷರ ಗಾತ್ರ : | |

ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಹುಲ್‌ ನಾಮಪತ್ರ ಸಲ್ಲಿಕೆ

ನವದೆಹಲಿ: ಕಾಂಗ್ರೆಸ್‌ನ ಅಧ್ಯಕ್ಷ ಸ್ಥಾನದ ಚುನಾವಣೆಗೆ ಪಕ್ಷದ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಸೋಮವಾರ ಬೆಳಿಗ್ಗೆ ನಾಮಪತ್ರ ಸಲ್ಲಿಸಿದರು.

ಅಧ್ಯಕ್ಷ ಸ್ಥಾನಕ್ಕೆ ಈವರೆಗೆ ಪಕ್ಷದಿಂದ ಯಾರೊಬ್ಬರು ನಾಮಪತ್ರ ಸಲ್ಲಿಸದ ಕಾರಣ ರಾಹುಲ್‌ ಗಾಂಧಿಗೆ ಅಧ್ಯಕ್ಷ ಸ್ಥಾನದ ಹಾದಿ ಸುಗಮವಾಗಿದೆ. 19 ವರ್ಷಗಳಿಂದ ಸೋನಿಯಾ ಗಾಂಧಿ ಪಕ್ಷದ ಮುಖ್ಯಸ್ಥೆಯಾಗಿದ್ದಾರೆ. ಪಕ್ಷದ ಎಲ್ಲ ಮುಖಂಡರ ಬೆಂಬಲ ದೊರೆತರೆ 47ರ ಹರೆಯದ ರಾಹುಲ್‌ ಅವಿರೋಧವಾಗಿ ಪಕ್ಷದ ಚುಕ್ಕಾಣಿ ಹಿಡಿಯಲಿದ್ದಾರೆ.

‘ಭಾನುವಾರದವರೆಗೂ ಯಾರೂ ನಾಮಪತ್ರ ಸಲ್ಲಿಸಿರಲಿಲ್ಲ’ ಎಂದು ಪಕ್ಷದ ಕೇಂದ್ರೀಯ ಚುನಾವಣಾ ಪ್ರಾಧಿಕಾರದ ಅಧ್ಯಕ್ಷ ಮುಳ್ಳಪಳ್ಳಿ ರಾಮಚಂದ್ರನ್‌ ತಿಳಿಸಿದ್ದರು. ನಾಮಪತ್ರಗಳನ್ನು ಸಲ್ಲಿಸಲು ಇಂದು ಕಡೆಯ ದಿನ.

ರಾಹುಲ್‌ ಅಧ್ಯಕ್ಷ ಗಾದಿ ಏರಲು ಈಗಾಗಲೆ ಸೋನಿಯಾ ಗಾಂಧಿ ಮತ್ತು ಮಾಜಿ ಪ್ರಧಾನಿ ಮನ್‌ಮೋಹನ್‌ ಸಿಂಗ್ ಅವರು ಒಪ್ಪಿಗೆ ಸೂಚಿಸಿದ್ದಾರೆ. ನಾಮಪತ್ರಗಳನ್ನು ಡಿ.11ರೊಳಗೆ ಹಿಂಪಡೆಯಬಹುದು. ಅಗತ್ಯಬಿದ್ದರೆ ಡಿ.16ಕ್ಕೆ ಚುನಾವಣೆ ನಡೆಸಿ, ಡಿ.19ಕ್ಕೆ ಫಲಿತಾಂಶ ಪ್ರಕಟಿಸಲು ಪಕ್ಷದ ಚುನಾವಣಾ ಪ್ರಾಧಿಕಾರ ನಿರ್ಧರಿಸಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.