6

ಶಾಸಕಿಯಾಗುವ ‘ಸೌಭಾಗ್ಯ’ ಕಳೆದುಕೊಂಡರು: ಆಂಜನೇಯ

Published:
Updated:

ಚಿತ್ರದುರ್ಗ: ‘ನಾನು ಹೇಳಿದಂತೆ ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ ಸೌಭಾಗ್ಯ ಬಸವರಾಜನ್ ನಡೆದುಕೊಳ್ಳಲಿಲ್ಲ. ಹೀಗಾಗಿ ಅವರು ಶಾಸಕರಾಗುವ ಅವಕಾಶ ಕಳೆದುಕೊಂಡರು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಆಂಜನೇಯ ಹೇಳಿದರು.

ಇಲ್ಲಿ ಭಾನುವಾರ ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಪಕ್ಷದಿಂದ ಈಗಾಗಲೇ ಅವರನ್ನು ಉಚ್ಚಾಟಿಸಲಾಗಿದೆ. ಹೀಗಿರುವಾಗ ವಿಧಾನಸಭಾ ಚುನಾವಣೆಗೆ ಪಕ್ಷದಿಂದ ಟಿಕೇಟ್ ಹೇಗೆ ಸಿಗುತ್ತದೆ ಎಂದು ಪ್ರಶ್ನಿಸಿದರು.

ಸೌಭಾಗ್ಯ ಅವರಿಗೆ ಸಾಕಷ್ಟು ಅವಕಾಶ ನೀಡಲಾಯಿತು. ಆದರೆ, ಅದನ್ನು ಬಳಸಿಕೊಳ್ಳಲಿಲ್ಲ. ಅಧ್ಯಕ್ಷ ಸ್ಥಾನ ಬಿಟ್ಟುಕೊಡುವ ವಿಚಾರದಲ್ಲಿ ಒಪ್ಪಂದದಂತೆ ನಡೆದುಕೊಳ್ಳಲಿಲ್ಲ. ಮಾತು ತಪ್ಪಿದ್ದರಿಂದ ಅವರನ್ನು ಪಕ್ಷದಿಂದ ಉಚ್ಚಾಟಿಸಲಾಗಿದೆ ಎಂದು ಸ್ಪಷ್ಟಪಡಿಸಿದರು.

‘ಬರುವ ವಿಧಾನಸಭಾ ಚುನಾವಣೆಯಲ್ಲಿ ಜತೆಗಿದ್ದು, ಗೆಲ್ಲಿಸುತ್ತೇನೆ ಎಂದು ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವಾಗ ಭರವಸೆ ನೀಡಿದ್ದೆ. ಆದರೆ, ಅದಕ್ಕೆ ಅವರೇ ಅವಕಾಶ ನೀಡಲಿಲ್ಲ’ ಎಂದು ದೂರಿದರು.

ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರೆ ವರ್ಚಸ್ಸು ಹೆಚ್ಚಾಗುತ್ತಿತ್ತೆ ಹೊರತು ಕಡಿಮೆ ಆಗುತ್ತಿರಲಿಲ್ಲ. ಇದನ್ನು ಅವರು ಅರ್ಥ ಮಾಡಿಕೊಳ್ಳಲಿಲ್ಲ. ಅಧಿಕಾರ ತಮಗೇ ಬೇಕು ಎಂದು ಬಯಸುವುದು ಎಷ್ಟರ ಮಟ್ಟಿಗೆ ಸರಿ ಎಂದು ಪ್ರಶ್ನಿಸಿದರು.

ಮೊಳಕಾಲ್ಮುರು: ಅಂಗವಿಕಲರು ಜೀವನದಲ್ಲಿ ಸ್ವಾವಲಂಬನೆ ಮೈಗೂಡಿಸಿಕೊಳ್ಳುವ ಮೂಲಕ ಅಂಗವೈಕಲ್ಯ ಮೆಟ್ಟಿ ನಿಂತು ಮಾದರಿ ಜೀವನ ನಡೆಸಬೇಕು ಎಂದು ಪಟ್ಟಣ ಪಂಚಾಯ್ತಿ ಅಧ್ಯಕ್ಷ ಜಿ.ಪ್ರಕಾಶ್‌ ಹೇಳಿದರು.

ಇಲ್ಲಿನ ಸರ್ಕಾರಿ ಬಾಲಕರ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಭಾನುವಾರ ಜಿಲ್ಲಾ ಪಂಚಾಯ್ತಿ, ತಾಲ್ಲೂಕು ಪಂಚಾಯ್ತಿ, ಸಾರ್ವಜನಿಕ ಶಿಕ್ಷಣ ಇಲಾಖೆ ಸಂಯುಕ್ತವಾಗಿ ಆಯೋಜಿಸಿದ್ದ ವಿಶ್ವ ಅಂಗವಿಕಲರ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.

ಸರ್ಕಾರ ಸಾಕಷ್ಟು ಯೋಜನೆಗಳನ್ನು ಅಂಗವಿಕಲರ ಅಭಿವೃದ್ಧಿಗೆ ಜಾರಿ ಮಾಡಿದೆ. ಸ್ಥಳೀಯ ಸಂಸ್ಥೆಗಳ ಅನುದಾನದಲ್ಲಿ, ಉದ್ಯೋಗ ನೀಡುವಲ್ಲಿಲ್ಲೂ ಮೀಸಲಾತಿ ನಿಗದಿ ಮಾಡಿದೆ. ಆದರೆ, ಅನೇಕ ಕಾರಣಗಳಿಂದಾಗಿ ಇವುಗಳ ಸೌಲಭ್ಯ ಅರ್ಹರನ್ನು ತಲುಪುತ್ತಿಲ್ಲ ಎಂಬ ದೂರುಗಳು ಕೇಳಿಬರುತ್ತಿವೆ. ಇದನ್ನು ಸರಿಪಡಿಸುವ ಹೊಣೆ ಎಲ್ಲರ ಮೇಲಿದೆ ಎಂದು ಹೇಳಿದರು.

ಪ್ರಭಾರ ಬಿಇಒ ಎಂ.ಹನುಮಂತಪ್ಪ, ಸಮನ್ವಯ ಶಿಕ್ಷಣಧಿಕಾರಿ ಹನುಮಂತಪ್ಪ, ಮುಖ್ಯಶಿಕ್ಷಕರಾದ ಎಂ.ಮಲ್ಲಿಕಾರ್ಜುನ್‌, ಡಿ.ವಿ.ಕೃಷ್ಣಮೂರ್ತಿ, ಎಂ.ಡಿ.ಲತೀಫ್‌ಸಾಬ್‌, ಎಂ.ರುದ್ರಯ್ಯ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಸಣ್ಣಯಲ್ಲಪ್ಪ, ಕಾರ್ಯದರ್ಶಿ ರಾಜಣ್ಣ, ಜಿಲ್ಲಾ ಉಪಾಧ್ಯಕ್ಷ ಹಾನಗಲ್‌ ಬಸವರಾಜ್‌, ಐಆರ್‌ಟಿ ಪರಮೇಶ್ವರಪ್ಪ, ಇಸಿಒ ಶಕೀಲ್‌ ಅಹಮದ್ ಅವರೂ ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry