ಈರುಳ್ಳಿ, ಟೊಮೆಟೊ ಬೆಲೆ ಶೀಘ್ರ ಇಳಿಕೆ: ಪಟ್ಟನಾಯಕ್

ನವದೆಹಲಿ: ‘ಮುಂದಿನ 15 ರಿಂದ 20 ದಿನಗಳಲ್ಲಿ ಈರುಳ್ಳಿ ಮತ್ತು ಟೊಮೆಟೊ ಚಿಲ್ಲರೆ ದರ ಇಳಿಕೆ ಕಾಣಲಿದೆ’ ಎಂದು ಕೇಂದ್ರ ಕೃಷಿ ಕಾರ್ಯದರ್ಶಿ ಎಸ್.ಕೆ. ಪಟ್ಟನಾಯಕ್ ತಿಳಿಸಿದ್ದಾರೆ.
‘ಬೆಲೆ ಏರಿಕೆ ತಾತ್ಕಾಲಿಕ ಸಮಸ್ಯೆಯಾಗಿದೆ. ಹೊಸ ಬೆಳೆ ಮಾರುಕಟ್ಟೆಗೆ ಬರುತ್ತಿದ್ದಂತೆಯೇ ಬೆಲೆಯಲ್ಲಿ ಇಳಿಕೆ ಕಂಡುಬರಲಿದೆ’ ಎಂದಿದ್ದಾರೆ.
‘ಅತಿ ಹೆಚ್ಚು ಈರುಳ್ಳಿ ಉತ್ಪಾದನೆ ಆಗುವ ಮಹಾರಾಷ್ಟ್ರದಲ್ಲಿ ಈ ಬಾರಿ ಉತ್ತಮ ಇಳುವರಿ ನಿರೀಕ್ಷೆ ಮಾಡಲಾಗಿದೆ’ ಎಂದು ತಿಳಿಸಿದ್ದಾರೆ.
ನವದೆಹಲಿಯಲ್ಲಿ ಈರುಳ್ಳಿ ಮತ್ತು ಟೊಮೆಟೊ ಪ್ರತಿ ಕೆ.ಜಿಗೆ ₹ 70 ರಿಂದ 80ರಂತೆ ಮಾರಾಟವಾಗುತ್ತಿವೆ. ಅಕಾಲಿಕ ಮಳೆ ಮತ್ತು ಒಣ ಹವೆಯಿಂದಾಗಿ ದೇಶದ ಕೆಲವು ಭಾಗಗಳಲ್ಲಿ ಈರುಳ್ಳಿ ಮತ್ತು ಟೊಮೆಟೊ ಇಳುವರಿ ಸ್ವಲ್ಪ ತಗ್ಗಿದೆ. ಈರುಳ್ಳಿ ರಫ್ತಿನ ಮೇಲೆ ಪ್ರತಿ ಟನ್‌ಗೆ ₹ 55,250ರಂತೆ ಕನಿಷ್ಠ ರಫ್ತು ಬೆಲೆ ವಿಧಿಸಿದೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.