ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯದ ಜನರಿಂದ ಸಿಎಂಗೆ ತಕ್ಕ ಪಾಠ

Last Updated 5 ಡಿಸೆಂಬರ್ 2017, 5:18 IST
ಅಕ್ಷರ ಗಾತ್ರ

ಮಂಗಳೂರು: ರಾಜ್ಯದಲ್ಲಿ ಹಿಂ ದುತ್ವ ವಿರೋಧಿ ಸರ್ಕಾರವಿದ್ದು, ಹಿಂದೂಗಳ ದಮನಕಾರಿ ನೀತಿ ಅನು ಸರಿಸಲಾಗುತ್ತಿದೆ. ರಾಜ್ಯದ ಜನರೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಬಿಜೆಪಿ ಯುವ ಮೋರ್ಚಾ ಜಿಲ್ಲಾ ಘಟಕದ ಅಧ್ಯಕ್ಷ ಹರೀಶ್‌ ಪೂಂಜ ಹೇಳಿದರು.

ಸಂಸದ ಪ್ರತಾಪಸಿಂಹ ಬಂಧನ ವಿರೋಧಿಸಿ, ಸೋಮವಾರ ನಗರದ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕಚೇರಿ ಎದುರು ಹಮ್ಮಿಕೊಂಡಿದ್ದ ಪ್ರತಿಭಟನೆ ಯಲ್ಲಿ ಅವರು ಮಾತನಾಡಿದರು.

ಹುಣಸೂರಿನಲ್ಲಿ ಶಾಂತಿಯುತವಾಗಿ ನಡೆಯುತ್ತಿದ್ದ ಶೋಭಾಯಾತ್ರೆಯನ್ನು ತಡೆದಿದ್ದಲ್ಲದೇ, ಲಾಠಿ ಪ್ರಹಾರ ಮಾಡ ಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆಯಂತೆಯೇ ಈ ರೀತಿ ಮಾಡಲಾಗಿದೆ ಎಂದು ಆರೋಪಿಸಿದರು.

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ, ಹಿಂದೂ ಸಮಾಜಕ್ಕೆ ಅನ್ಯಾಯ ಮಾಡುತ್ತಿದೆ. ಹುಣಸೂರಿನಲ್ಲಿ ಸಂಸದ ಪ್ರತಾಪ ಸಿಂಹ ಅವರ ಮೇಲೆ ಹಲ್ಲೆ ಮಾಡಲಾಗಿದ್ದು, ಅಮಾನುಷವಾಗಿ ನಡೆಸಿಕೊಳ್ಳಲಾಗಿದೆ. ಅವರು ಪೊಲೀ ಸ್‌ ಇಲಾಖೆಯನ್ನು ದುರ್ಬಳಕೆ ಮಾಡಿ ಕೊಳ್ಳುತ್ತಿದ್ದಾರೆ ಎಂದು ದೂರಿದರು.

ಹನುಮಾನ್‌ ಜಯಂತಿ ಆಚರಣೆ ಹಿಂದೂಗಳ ಶ್ರದ್ಧಾ–ಭಕ್ತಿಯ ಸಂಕೇತ. ಕಾಂಗ್ರೆಸ್‌ ಸರ್ಕಾರ ಇಂತಹ ಕಾರ್ಯ ಕ್ರಮಕ್ಕೆ ಅಡ್ಡಿ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಹರೀಶ್‌ ಮೂಡುಶೆಡ್ಡೆ, ಸಂದೀಪ್‌ ಶೆಟ್ಟಿ, ಯಶಪಾಲ್‌, ಸುಜೀತ್‌ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT