7

‘ಬಸವಕಲ್ಯಾಣದಲ್ಲಿ ಸಂಪುಟ ಸಭೆ’

Published:
Updated:

ಬಸವಕಲ್ಯಾಣ:`ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಸಮಾನತೆಯ ಹರಿಕರರಾದ ಬಸವಣ್ಣನವರ ಕಾರ್ಯಕ್ಷೇತ್ರವಾದ ಬಸವಕಲ್ಯಾಣದಲ್ಲಿ ಸಚಿವ ಸಂಪುಟ ಸಭೆ ನಡೆಸಲಾಗುವುದು. ಒಂದು ದಿನದ ಅಧಿವೇಶನ ಹಮ್ಮಿಕೊಳ್ಳುವ ಬಗ್ಗೆಯೂ ಪರಿಶೀಲಿಸಲಾಗುವುದು’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದರು.

ಸೋಮವಾರ ಇಲ್ಲಿನ ಅಕ್ಕಮಹಾದೇವಿ ಕಾಲೇಜು ಆವರಣದಲ್ಲಿ ನಡೆದ ಬಿಜೆಪಿ ಪರಿವರ್ತನಾ ಯಾತ್ರೆಯ ಸ್ವಾಗತ ಸಮಾರಂಭದಲ್ಲಿ ಮಾತನಾಡಿದರು.

`ಶರಣರ ಸ್ಮಾರಕಗಳ ಅಭಿವೃದ್ಧಿಗೆ ರಚಿತವಾದ ಬಸವಕಲ್ಯಾಣ ಅಭಿವೃದ್ಧಿ ಮಂಡಳಿಗೆ ಕಾಂಗ್ರೆಸ್ ಸರ್ಕಾರ ನಿರ್ಲಕ್ಷ್ಯ ತೋರಿದೆ. ನಾನು ಮುಖ್ಯಮಂತ್ರಿ ಆಗಿದ್ದಾಗ ಅಭಿವೃದ್ಧಿ ಕಾರ್ಯಕ್ಕೆ ₹ 36 ಕೋಟಿ ಒದಗಿಸಲಾಗಿತ್ತು.

ಮುಂದೆ ಅಧಿಕಾರಕ್ಕೆ ಬಂದರೆ ₹ 50 ಕೋಟಿ ಬಿಡುಗಡೆ ಮಾಡಲಾಗುವುದು’ ಎಂದು ಅವರು ತಿಳಿಸಿದರು.

‘ತಾಲ್ಲೂಕಿನ ಸಮಗ್ರ ಅಭಿವೃದ್ಧಿ ಕೈಗೊಳ್ಳಲಾಗುವುದು. ವಾಹನಗಳ ಬಿಡಿಭಾಗ ತಯಾರಿಕಾ ಘಟಕ ಸ್ಥಾಪನೆ ಮಾಡಲಾಗುವುದು’ ಎಂದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry