7

ಹಿರಿಯೂರು: ಭೂ ಹಕ್ಕಿಗಾಗಿ ಉಪವಾಸ ಸತ್ಯಾಗ್ರಹ ನಾಳೆ

Published:
Updated:

ಹಿರಿಯೂರು: ಕರ್ನಾಟಕ ಭೂ ಹಕ್ಕುದಾರರ ವೇದಿಕೆ ನೇತೃತ್ವದಲ್ಲಿ ಡಿ. 6ರಂದು ಬೆಳಿಗ್ಗೆ 10ಕ್ಕೆ ಭೂ ಹಕ್ಕಿಗಾಗಿ ಆಗ್ರಹಿಸಿ ಒಂದು ದಿನ ಉಪವಾಸ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ ಎಂದು ವೇದಿಕೆ ಅಧ್ಯಕ್ಷ ರಂಗಸ್ವಾಮಿ ತಿಳಿಸಿದ್ದಾರೆ.

ಬಗರ್‌ಹುಕುಂ ಮತ್ತು ಅರಣ್ಯ ಭೂಮಿ ಸಾಗುವಳಿದಾರರಿಗೆ ಮಾಜಿ ಸಚಿವ ದಿವಂಗತ ಕೆ.ಎಚ್. ರಂಗನಾಥ್ ಅವರು 900ಕ್ಕೂ ಹೆಚ್ಚು ಹಕ್ಕು ಪತ್ರಗಳನ್ನು ವಿತರಿಸಿದ್ದರು. ಇದನ್ನು ಹೊರತು ಪಡಿಸಿದರೆ, ಬಾಕಿ ಉಳಿದಿರುವ 11 ಸಾವಿರ ಅರ್ಜಿಗಳನ್ನು ಇನ್ನೂ ವಿಲೇವಾರಿ ಮಾಡಿಲ್ಲ. ಆಡಳಿತ ಯಂತ್ರದ ನಿಷ್ಕ್ರಿಯತೆ ಖಂಡಿಸಿ ಉಪವಾಸ ಸತ್ಯಾಗ್ರಹ ಹಮ್ಮಿಕೊಳ್ಳುತ್ತಿದ್ದೇವೆ. ಫಲಾನುಭವಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಅವರು ಮನವಿ ಮಾಡಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry