ಬುಧವಾರ, ಮಾರ್ಚ್ 3, 2021
21 °C

ಬಂಗಾಳಕೊಲ್ಲಿಯಲ್ಲಿ ಮುಂದಿನ 24 ತಾಸಿನಲ್ಲಿ ಮತ್ತೆ ವಾಯುಭಾರ ಕುಸಿತ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬಂಗಾಳಕೊಲ್ಲಿಯಲ್ಲಿ ಮುಂದಿನ 24 ತಾಸಿನಲ್ಲಿ ಮತ್ತೆ ವಾಯುಭಾರ ಕುಸಿತ

ನವದೆಹಲಿ: ‘ಒಖಿ’ ಚಂಡಮಾರುತ ತಮಿಳುನಾಡು ಹಾಗೂ ಕೇರಳ, ಲಕ್ಷದ್ವೀಪ, ಕರ್ನಾಟಕದ ಕರಾವಳಿಗಳಿಗೆ ಅಪ್ಪಳಿಸಿ ಹಾನಿ ಮಾಡಿ ಮುಂದೆ ಸಾಗುತ್ತಿದೆ. ಇದರ ಬೆನ್ನಲ್ಲೆ ಬಂಗಾಳಕೊಲ್ಲಿಯಲ್ಲಿ ಮತ್ತೆ ವಾಯುಭಾರ ಕುಸಿತ ಉಂಟಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಬಂಗಾಳಕೊಲ್ಲಿಯಲ್ಲಿ ಕಡಿಮೆ ಒತ್ತಡ ಪರಿಸ್ಥಿತಿ ಇದ್ದು, ವಾಯಭಾರ ಕುಸಿತ ಮುಂದುರೆಯಲಿದೆ. ಮುಂದಿನ 24 ಗಂಟೆಗಳಲ್ಲಿ ಬಂಗಾಳಕೊಲ್ಲಿಯ ಆಗ್ನೇಯ ದಿಕ್ಕಿನಲ್ಲಿ ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆ ಇದೆ. ಅದು ಮುಂದಿನ 48 ಗಂಟೆಗಳಲ್ಲಿ ಮತ್ತಷ್ಟು ಕುಸಿದು ತೀವ್ರತೆ ಪಡೆದುಕೊಳ್ಳಲಿದೆ ಎಂದು ಕೇಂದ್ರ ಅರಣ್ಯ ಮತ್ತು ಹವಾಮಾನ ಇಲಾಖೆ ಸಚಿವ ಡಾ.ಹರ್ಷವರ್ದನ ಅವರು ಮಂಗಳವಾರ ಟ್ವೀಟ್‌ ಮಾಡಿದ್ದಾರೆ.

ತೀವ್ರ ಕುಸಿತದೊಂದಿಗೆ ಮಾರುತವು ಮುಂದಿನ ಮೂರು ದಿನಗಳಲ್ಲಿ ಉತ್ತರ ತಮಿಳುನಾಡು ಹಾಗೂ ದಕ್ಷಿಣ ಆಂಧ್ರಪ್ರದೇಶದ ಕರಾವಳಿ ತೀರದತ್ತ ಸಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.