ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಾಕ್‌ ರಸ್ತೆ ಯೋಜನೆಗಳಿಗೆ ಚೀನಾ ನೆರವು ಸ್ಥಗಿತ

ಹೊಸ ನಿಯಮಾವಳಿ ರೂಪಿಸಲು ನಿರ್ಧಾರ
Last Updated 5 ಡಿಸೆಂಬರ್ 2017, 19:30 IST
ಅಕ್ಷರ ಗಾತ್ರ

ಇಸ್ಲಾಮಾಬಾದ್: ಪಾಕಿಸ್ತಾನದ ಮೂರು ಪ್ರಮುಖ ರಸ್ತೆ ಯೋಜನೆಗಳಿಗೆ ನೀಡುತ್ತಿರುವ ಆರ್ಥಿಕ ನೆರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ಚೀನಾ ನಿರ್ಧರಿಸಿದೆ.

ಭ್ರಷ್ಟಾಚಾರ ಆರೋಪಗಳು ಕೇಳಿ ಬಂದಿದ್ದರಿಂದ ಚೀನಾ ಈ ನಿಲುವು ಕೈಗೊಂಡಿದ್ದು, ಪಾಕಿಸ್ತಾನಕ್ಕೆ ಆಘಾತವಾಗಿದೆ. ಚೀನಾದ ಈ ನಿರ್ಧಾರ ಅಂದಾಜು ₹1 ಲಕ್ಷ ಕೋಟಿ ಮೌಲ್ಯದ ರಸ್ತೆ ಯೋಜನೆಗಳ ಮೇಲೆ ಪರಿಣಾಮ ಬೀರಲಿದೆ ಎಂದು ’ಡಾನ್’ ಪತ್ರಿಕೆ ವರದಿ ಮಾಡಿದೆ.

ಚೀನಾ–ಪಾಕಿಸ್ತಾನ ಆರ್ಥಿಕ ವಲಯದ (ಸಿಪಿಇಸಿ) ಭಾಗವಾಗಿ ಈ ರಸ್ತೆಗಳ ನಿರ್ಮಾಣ ಕಾರ್ಯ ಕೈಗೊಳ್ಳಲಾಗಿತ್ತು. ಪಾಕಿಸ್ತಾನದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಎಚ್‌ಎ) ಈ ಯೋಜನೆಗಳನ್ನು ಕೈಗೊಂಡಿದೆ.

ಹೊಸದಾಗಿ ನಿಯಮಾವಳಿಗಳನ್ನು ರೂಪಿಸಿದ ಬಳಿಕವಷ್ಟೇ ಈ ನಿರ್ಮಾಣ ಕಾರ್ಯಗಳಿಗೆ ಚೀನಾ ಸರ್ಕಾರ ಆರ್ಥಿಕ ನೆರವು ನೀಡಲಿದೆ ಎಂದು ಪಾಕಿಸ್ತಾನದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

₹3.86 ಲಕ್ಷ ಕೋಟಿ ವೆಚ್ಚದ ಸಿಪಿಇಸಿ ಯೋಜನೆ ಚೀನಾದ ಮಹತ್ವಾಕಾಂಕ್ಷಿ ಯೋಜನೆಯಾದ ‘ಒಂದು ಪ್ರದೇಶ, ಒಂದು ರಸ್ತೆ’ಯ ಭಾಗವಾಗಿದೆ. ಸಿಪಿಇಸಿ ಅಡಿಯಲ್ಲಿ ನಿರ್ಮಾಣವಾಗುವ ರಸ್ತೆ ಪಾಕಿಸ್ತಾನ ಆಕ್ರಮಿತ ಕಾಶ್ಮೀರ ಮೂಲಕ ಹಾದುಹೋಗಲಿದ್ದು, ಚೀನಾದ ಕ್ಸಿನ್‌ಜಿಯಾಂಗ್‌ ಪ್ರಾಂತ ಹಾಗೂ ಪಾಕಿಸ್ತಾನ ಬಲೂಚಿಸ್ತಾನ ಪ್ರಾಂತಕ್ಕೆ ಸಂಪರ್ಕ ಕಲ್ಪಿಸಲಿದೆ.

ಆರಂಭದಲ್ಲಿ ಈ ಮೂರು ರಸ್ತೆಗಳ ನಿರ್ಮಾಣವನ್ನು ಪಾಕಿಸ್ತಾನ ಸರ್ಕಾರವೇ ವಹಿಸಿಕೊಂಡಿತ್ತು. ಆದರೆ, ಚೀನಾದ ಆರ್ಥಿಕ ನೆರವು ಪಡೆಯುವ ಸಲುವಾಗಿ 2016ರ ಡಿಸೆಂಬರ್‌ನಲ್ಲಿ ಈ ರಸ್ತೆ ನಿರ್ಮಾಣ ಕಾರ್ಯವನ್ನು ಸಿಪಿಇಸಿ ವ್ಯಾಪ್ತಿಗೆ ಸೇರಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT