ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಯೋತ್ಪಾದನೆ ವಿರುದ್ಧ ಕಠಿಣ ಕ್ರಮಕ್ಕೆ ಪಾಕ್‌ಗೆ ಅಮೆರಿಕ ಸೂಚನೆ

Last Updated 5 ಡಿಸೆಂಬರ್ 2017, 19:30 IST
ಅಕ್ಷರ ಗಾತ್ರ

ಇಸ್ಲಾಮಾಬಾದ್‌: ಭಯೋತ್ಪಾದನೆ ಚಟುವಟಿಕೆಗಳನ್ನು ದಮನ ಮಾಡಲು ಪಾಕಿಸ್ತಾನ ಕೈಗೊಂಡಿರುವ ಕ್ರಮಗಳು ಸಾಲದು ಎಂದು ಅಮೆರಿಕ ಹೇಳಿದೆ.

ಉಗ್ರರ ವಿರುದ್ಧ ಕೈಗೊಂಡಿರುವ ಕಾರ್ಯಾಚರಣೆಯನ್ನು ಮತ್ತಷ್ಟು ಬಲಪಡಿಸಬೇಕು. ಈ ಬಗ್ಗೆ ಕಠಿಣ ಕ್ರಮಗಳನ್ನು ಕೈಗೊಂಡು ಭಯೋತ್ಪಾದನೆ ಚಟುವಟಿಕೆಗಳನ್ನು ನಿರ್ಮೂಲನೆ ಮಾಡಬೇಕು ಎಂದು ಸ್ಪಷ್ಟವಾಗಿ ಸೂಚಿಸಿದೆ.

ಪಾಕಿಸ್ತಾನಕ್ಕೆ ಭೇಟಿ ನೀಡಿರುವ ಅಮೆರಿಕದ ರಕ್ಷಣಾ ಕಾರ್ಯದರ್ಶಿ ಜೇಮ್ಸ್‌ ಮ್ಯಾಟಿಸ್‌ ಅವರು ಪ್ರಧಾನಿ ಶಾಹಿದ್‌ ಖಕಾನ್‌ ಅಬ್ಬಾಸಿ ಹಾಗೂ ಸೇನಾ ಮುಖ್ಯಸ್ಥ ಜನರಲ್‌ ಒಮರ್‌ ಜಾವೇದ್‌ ಬಾಜ್ವಾ ಅವರೊಂದಿಗೆ ಪ್ರತ್ಯೇಕವಾಗಿ ಚರ್ಚೆ ನಡೆಸಿದ ನಂತರ ಅವರು ಈ ಸೂಚನೆ ನೀಡಿದ್ದಾರೆ.

ಉಗ್ರರ ದಾಳಿಯನ್ನು ಪರಿಣಾಮಕಾರಿಯಾಗಿ ಎದುರಿಸಲು ಹೊಸ ಮಾರ್ಗಗಳನ್ನು ಕಂಡುಕೊಳ್ಳಬೇಕು ಎಂದು ಮ್ಯಾಟಿಸ್‌ ಅವರು ಹೇಳಿದ್ದಾರೆ.

ತಮ್ಮ ಪ್ರವಾಸದ ಅಂತಿಮ ದಿನ ಮಾತನಾಡಿದ ಮ್ಯಾಟಿಸ್‌, ’ಭಯೋತ್ಪಾದನೆ ವಿಷಯದಲ್ಲಿ ಪಾಕಿಸ್ತಾನವು ತನ್ನ ನಿರ್ಧಾರಗಳನ್ನು ಮರುಪರಿಶೀಲನೆ ನಡೆಸಲೇಬೇಕು ಹಾಗೂ ಕಾರ್ಯಾಚರಣೆಯ ಶೈಲಿಯೂ ಬದಲಾಗಬೇಕಾಗಿದೆ’ ಎಂದು ಸ್ಪಷ್ಟವಾಗಿ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT