7
ಬಿ.ಸಿ.ರೋಡ್-– ಸುರತ್ಕಲ್ ಹೆದ್ದಾರಿ ಕಾಂಕ್ರಿಟೀಕರಣ

₹500 ಕೋಟಿ ಮಂಜೂರು: ಸಂಸದ ನಳಿನ್‌

Published:
Updated:
X

'ಪ್ರಜಾವಾಣಿ'ಯ ಜಾಲತಾಣವನ್ನು ಹೆಚ್ಚು ಓದುಗ ಸ್ನೇಹಿಯಾಗಿಸುವ ಉದ್ದೇಶದಿಂದ ಹೊಸ ವಿನ್ಯಾಸವನ್ನು ರೂಪಿಸಲಾಗಿದೆ.
ಈ ವಿನ್ಯಾಸದ ಕುರಿತ ನಿಮ್ಮ ಅಭಿಪ್ರಾಯಗಳನ್ನು ಇಲ್ಲಿರುವ ಲಿಂಕ್ ಕ್ಲಿಕ್ಕಿಸುವ ಮೂಲಕ ನಮಗೆ ತಿಳಿಸಬಹುದು

webfeedback@prajavani.co.in

ಪುತ್ತೂರು: ‘ಬಿ.ಸಿ. ರೋಡ್-ಸುರ ತ್ಕಲ್ ರಾಷ್ಟ್ರೀಯ ಹೆದ್ದಾರಿಯನ್ನು ಮೇಲ್ದರ್ಜೆಗೇರಿಸಿ ಸಂಪೂರ್ಣ ಕಾಂಕ್ರಿಟೀ ಕರಣಗೊಳಿಸಲು ಕೇಂದ್ರ ಸರ್ಕಾರ ₹500 ಕೋಟಿ ಅನುದಾನ ಮಂಜೂರು ಮಾಡಿದೆ. ಡಿ.ಪಿ.ಆರ್. ಮೂಲಕ ಟೆಂಡರ್ ಕರೆಯಲಾಗಿದೆ’ ಎಂದು ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದರು.

ಪುತ್ತೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ‘ಬಿ.ಸಿ.ರೋಡ್-ಅಡ್ಡಹೊಳೆ ನಡುವಣ ರಾಷ್ಟ್ರೀಯ ಹೆದ್ದಾರಿ–75ರಲ್ಲಿ ಚತುಷ್ಪಥ ಕಾಮಗಾರಿ ಯನ್ನು ನಡೆಸಲು ಈಗಾಗಲೇ ಗುತ್ತಿಗೆ ದಾರ ಸಂಸ್ಥೆ ಕಾಮಗಾರಿಗಳನ್ನು ಆರಂಭಿಸಿದೆ. ಜನವರಿ 1ರಿಂದ ಶಿರಾಡಿ ಘಾಟ್ ರಸ್ತೆಯ 3ನೇ ಹಂತದ ಕಾಂಕ್ರೀಟ್ ಕಾಮ ಗಾರಿ ಆರಂಭ ವಾಗಲಿದೆ. 13 ಕಿ.ಮೀ. ಉದ್ದ ಘಾಟ್ ರಸ್ತೆಯು ₹120ಕೋಟಿ ವೆಚ್ಚದಲ್ಲಿ ಅಭಿವೃದ್ಧಿಗೊ ಳ್ಳಲಿದೆ’ ಎಂದರು.

‘ಕಲ್ಲಡ್ಕ– ಕಾಞಂಗಾಡ್ ಅಂತರರಾಜ್ಯ ಲೋಕೋಪಯೋಗಿ ರಸ್ತೆಗೆ ಮತ್ತು ಗುಂಡ್ಯ-ಸುಬ್ರಹ್ಮಣ್ಯ ಲೋಕೋಪಯೋಗಿ ರಸ್ತೆಯ

ಅಭಿವೃದ್ಧಿ ಕಾಮಗಾರಿಗಾಗಿ ಕೇಂದ್ರವು ಅನುದಾನ ಬಿಡುಗಡೆಗೊಳಿಸಿದೆ. ಕುಲಶೇಖರ-ಕಾರ್ಕಳ ರಾಷ್ಟ್ರೀಯ ಹೆದ್ದಾರಿಯಲ್ಲಿ ಹಾಲಿ ಇರುವ ರಸ್ತೆಯನ್ನು ಅಭಿವೃದ್ಧಿಪಡಿಸಲು ₹17 ಕೋಟಿ ಅನುದಾನವನ್ನು ಕೇಂದ್ರ ನೀಡಿದೆ. ಈ ರಸ್ತೆಯನ್ನು ಸಂಪೂರ್ಣವಾಗಿ ಮೇಲ್ದರ್ಜೆಗೇರಿಸಲು ಕೇಂದ್ರ ಒಪ್ಪಿಗೆ ನೀಡಿದ್ದು, ಭೂಸ್ವಾಧೀನ ಕುರಿತಂತೆ ಮುಂದಿನ ಕ್ರಮಗಳನ್ನು ಕೈಗೊಳ್ಳಲು ಸಂಬಂಧಪಟ್ಟ ಕಡತ ದ.ಕ. ಜಿಲ್ಲಾಧಿಕಾರಿಗಳ ಕಚೇರಿಗೆ ಬಂದಿದೆ’ ಎಂದು ವಿವರಿಸಿದರು.

‘ಮಾಣಿ-ಮೈಸೂರು ರಾಜ್ಯ ಹೆದ್ದಾರಿ ಯನ್ನು ರಾಷ್ಟ್ರೀಯ ಹೆದ್ದಾರಿಯಾಗಿ ಮೇಲ್ದರ್ಜೆಗೇರಿರುವ ಹಿನ್ನಲೆಯಲ್ಲಿ ದ.ಕ. ಲೋಕಸಭಾ ಕ್ಷೇತ್ರ

ವ್ಯಾಪ್ತಿಯ ಮಾಣಿ-ಸಂಪಾಜೆ ನಡುವಣ ಹೆದ್ದಾರಿಯ ರಸ್ತೆಯ ಇಕ್ಕೆಲಗಳಲ್ಲಿನ ಪೊದೆಗಳನ್ನು ತೆರವುಗೊಳಿಸುವ ಮತ್ತು ರಸ್ತೆ ಸುರ ಕ್ಷತಾ ಕ್ರಮಗಳನ್ನು ಕೈಗೊಳ್ಳಲು ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಜನವರಿ 1ರ ಮೊದಲು ಈ ಕಾಮಗಾರಿಗಳನ್ನು ಪೂರ್ಣಗೊಳಿಸಲು ಗಡುವು ವಿಧಿಸಲಾಗಿದೆ’ ಎಂದು ಸಂಸದ ನಳಿನ್ ಹೇಳಿದರು.

ಪುತ್ತೂರು ಮಂಡಲ ಬಿಜೆಪಿ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ, ಪುತ್ತೂರು ಎಪಿಎಂಸಿ ಅಧ್ಯಕ್ಷ ಬೂಡಿಯಾರ್ ರಾಧಾಕೃಷ್ಣ ರೈ, ತಾಲ್ಲೂಕು ಪಂಚಾಯಿತಿ ಸದಸ್ಯ ಸಾಜ ರಾಧಾಕೃಷ್ಣ ಆಳ್ವ, ಸಹಕಾರಿ ಮುಂದಾಳು ಕಂಟ್ರಮಜಲು ಭಾಸ್ಕರ ರೈ ಉಪಸ್ಥಿತರಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry