ಆನೆ ದಾಳಿ: ಮತ್ತೊಬ್ಬರಿಗೆ ಗಾಯ

ಚಿತ್ರದುರ್ಗ: ಜಿಲ್ಲೆಯಲ್ಲಿ ಆನೆಗಳ ಅವಾಂತರ ಮುಂದುವರಿದಿದ್ದು ಬುಧವಾರ ಮುಂಜಾನೆ 7.30ರ ಸುಮಾರಿಗೆ ತಾಲ್ಲೂಕಿನ ಆಯ್ತೋಳಿನಲ್ಲಿ ಕಾಟಪ್ಪ ಎಂಬುವವರ ಮೇಲೆ ದಾಳಿ ಮಾಡಿದೆ.
ಆನೆ ದಾಳಿಯಿಂದ ತೀವ್ರವಾಗಿ ಗಾಯಗೊಂಡಿರುವ ಸಿ. ಕಾಟಪ್ಪ (65) ಅವರನ್ನು ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಮಂಗಳವಾರ ಸಂಜೆ ಗಾಯಗೊಂಡಿದ್ದ ರವಿ (32) ಅವರಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅವರು ಅಪಾಯದಿಂದ ಪಾರಾಗಿದ್ದಾರೆ.
ಪಾಪೇನಹಳ್ಳಿ ವ್ಯಾಪ್ತಿಯಲ್ಲಿ ಬೀಡುಬಿಟ್ಟಿರುವ ಆನೆಗಳನ್ನು ಓಡಿಸುವ ಪ್ರಯತ್ನ ಮುಂದುವರಿದಿದೆ. ಸ್ಥಳಕ್ಕೆ ಡಿಎಫ್ಓ ಮಂಜುನಾಥ್ ಮತ್ತು ಅರಣ್ಯ ಇಲಾಖೆ ಸಿಬ್ಬಂದಿ ಮೊಕ್ಕಾಂ ಹೂಡಿದ್ದಾರೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.