7

ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ಉದಾಸಿ

Published:
Updated:

ಅಕ್ಕಿಆಲೂರ: ‘ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ನಡೆಯುತ್ತಿರುವ ಪರಿವರ್ತನಾ ಯಾತ್ರೆಯಿಂದಾಗಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ

ಆಡಳಿತ ವಿರೋಧಿ ಅಲೆ ಸೃಷ್ಟಿಯಾಗುತ್ತಿದೆ’ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಸಿ.ಎಂ.ಉದಾಸಿ ನುಡಿದರು.

ಇಲ್ಲಿಗೆ ಸಮೀಪದ ಕೂಸನೂರಿನಲ್ಲಿ ಪರಿವರ್ತನಾ ಯಾತ್ರೆಯ ಪೂರ್ವ ಭಾವಿಯಾಗಿ ಮಂಗಳವಾರ ನಡೆದ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ನಿಂಗಪ್ಪ ಗೊಬ್ಬೇರ ಮಾತನಾಡಿ, ‘ಇದೇ 23ಕ್ಕೆ ಹಾನಗಲ್‌ಗೆ ಪರಿವರ್ತನಾ ಯಾತ್ರೆ ಬರಲಿದೆ. ಕಾರ್ಯಕರ್ತರು ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕು’ ಎಂದು ಮನವಿ ಮಾಡಿದರು.

ತಾಲ್ಲೂಕು ಘಟಕದ ಪ್ರಧಾನ ಕಾರ್ಯದರ್ಶಿ ಶಿವಲಿಂಗಪ್ಪ ತಲ್ಲೂರ, ಕಾರ್ಯದರ್ಶಿ ಡಾ.ಸುನೀಲ ಹಿರೇಮಠ, ತಾಲ್ಲೂಕು ಪಂಚಾಯ್ತಿ ಮಾಜಿ ಉಪಾಧ್ಯಕ್ಷ ಸಿದ್ದಲಿಂಗಪ್ಪ ಶಂಕರಿಕೊಪ್ಪ, ಜಿಲ್ಲಾ ಸಹಕಾರ ಯುನಿಯನ್ ಅಧ್ಯಕ್ಷ ಕಲ್ಯಾಣಕುಮಾರ ಶೆಟ್ಟರ, ಸೋಮಣ್ಣ ರೇವಣ್ಣನವರ, ಸದಾನಂದಗೌಡ ಪಾಟೀಲ, ಫಕ್ಕಿರೇಶ ರಟ್ಟೀಹಳ್ಳಿ, ವೀರೇಶ ಆಲದಕಟ್ಟಿ, ಮಹೇಶ ಬಣಕಾರ, ದಾನಪ್ಪ ಲಮಾಣಿ, ಜಗದೀಶಪ್ಪ ಹಾದಿಮನಿ, ಪ್ರಶಾಂತ ಕಾಮನಹಳ್ಳಿ, ರಾಮಪ್ಪ ಮಾದಪ್ಪನವರ ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry