7

ರೈತರ ಆತ್ಮಹತ್ಯೆ: ಸರ್ಕಾರದ ಅಲಕ್ಷ್ಯ ಸಲ್ಲದು –ಎಚ್‌ಡಿಕೆ

Published:
Updated:

ಮದ್ದೂರು: ರಾಜ್ಯದಲ್ಲಿ ನಿರಂತರ ರೈತರ ಆತ್ಮಹತ್ಯೆ ನಡೆಯುತ್ತಿದ್ದರೂ ಸರ್ಕಾರ ಇದು ನನಗೆ ಸಂಬಂಧ ಇಲ್ಲವೆಂಬಂತೆ ಇರುವುದು ನಾಚಿಕೆಗೇಡಿನ ಸಂಗತಿ ಎಂದು ಜೆಡಿಎಸ್‌ ರಾಜ್ಯ ಘಟಕದ ಅಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಕಿಡಿ ಕಾರಿದರು.

ಪಟ್ಟಣದಲ್ಲಿ ಜೆಡಿಎಸ್ ಮುಖಂಡ ರಾಮಕೃಷ್ಣ ಅವರ ನಿವಾಸಕ್ಕೆ ಮಂಗಳವಾರ ಭೇಟಿ ನೀಡಿದ್ದ ಅವರು, ಸಮಸ್ಯೆಗಳಿದ್ದರೂ ರೈತರು ಆತ್ಮಹತ್ಯೆಯಂಥ ಪ್ರಯತ್ನಗಳಿಗೆ ಮುಂದಾಗಬಾರದು ಎಂದು ಮನವಿ ಮಾಡಿದರು.

‘ಚುನಾವಣೆ ನಂತರ ಜೆಡಿಎಸ್ ಅಧಿಕಾರಕ್ಕೆ ಬರುವುದು ನಿಶ್ಚಿತ. ರೈತರ ಸಮಸ್ಯೆ ಪರಿಹಾರಕ್ಕೆ ಜೆಡಿಎಸ್‌ ಅಗತ್ಯ ಕ್ರಮಕೈಗೊಳ್ಳಲಿದೆ’ ಎಂದು ಭರವಸೆ ನೀಡಿದರು.

ಜೆಡಿಎಸ್ ಯುವ ಘಟಕದ ಅಧ್ಯಕ್ಷ ಸಿ.ಟಿ.ಶಂಕರ್, ಮುಖಂಡರಾದ ಮಾದನಾಯಕನಹಳ್ಳಿ ರಾಜಣ್ಣ, ಕೂಳಗೆರೆ ಶೇಖರ್, ತೊಪ್ಪನಹಳ್ಳಿ ಪ್ರಕಾಶ್, ಚಿಕ್ಕತಿಮ್ಮೇಗೌಡ, ಕಾಳೀರಯ್ಯ, ಕೆಂಗಲ್‌ ಗೌಡ ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry