ಹಕ್ಕು ಚ್ಯುತಿ ಪ್ರಕರಣ: ರವಿ ಬೆಳಗೆರೆ, ಅನಿಲ್ ರಾಜ್ ಶಿಕ್ಷೆ ಜಾರಿಗೆ ಹೈಕೋರ್ಟ್ ತಡೆ

ಬೆಂಗಳೂರು: ಶಾಸಕರ ಹಕ್ಕು ಚ್ಯುತಿ ಪ್ರಕರಣದಲ್ಲಿ ಪತ್ರಕರ್ತರಾದ ರವಿ ಬೆಳಗೆರೆ ಹಾಗೂ ಅನಿಲ್ ರಾಜ್ ಅವರಿಗೆ ಹಕ್ಕು ಬಾಧ್ಯತಾ ಸಮಿತಿ ವಿಧಿಸಿರುವ ಒಂದು ವರ್ಷದ ಜೈಲು ಶಿಕ್ಷೆ ಮತ್ತು ತಲಾ ₹ 10 ಸಾವಿರ ದಂಡದ ಆದೇಶ ಜಾರಿಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.
‘ಹಾಯ್ ಬೆಂಗಳೂರು’ ಪತ್ರಿಕೆಯ ಸಂಪಾದಕ ರವಿ ಬೆಳಗೆರೆ ಮತ್ತು ‘ಯಲಹಂಕ ವಾಯ್ಸ್’ ಸಂಪಾದಕ ಅನಿಲ್‌ರಾಜ್ ಅವರಿಗೆ ಶಿಕ್ಷೆ ಮತ್ತು ದಂಡ ಜಾರಿಗೊಳಿಸಲು ಪೊಲೀಸ್ ಇಲಾಖೆಗೆ ವಿಧಾನಸಭೆ ಸಚಿವಾಲಯ ಈ ವರ್ಷದ ಜೂನ್ ತಿಂಗಳಲ್ಲಿ ಆದೇಶ ನೀಡಿತ್ತು.
ವಿಧಾನಸಭೆ ಹಕ್ಕು ಬಾಧ್ಯತೆಗಳ ಸಮಿತಿಯು ಇಬ್ಬರೂ ಸಂಪಾದಕರಿಗೆ ಶಿಕ್ಷೆ ವಿಧಿಸಿತ್ತು. ವಿಧಾನಸಭಾ ಅಧಿವೇಶನದಲ್ಲೂ ಈ ವಿಷಯವನ್ನು ಸದಸ್ಯರು ಪ್ರಸ್ತಾಪಿಸಿದ್ದರು. ಸದನವೂ ಹಕ್ಕು ಬಾಧ್ಯತೆ ಸಮಿತಿಯ ವರದಿಯನ್ನು ಅಂಗೀಕರಿಸಿ ಶಿಕ್ಷೆ ಜಾರಿಗೊಳಿಸಲು ನಿರ್ಣಯ ತೆಗೆದುಕೊಂಡಿತ್ತು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.