ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೂರನೇ ಟೆಸ್ಟ್‌ ಪಂದ್ಯ ಡ್ರಾನಲ್ಲಿ ಅಂತ್ಯ: ಭಾರತಕ್ಕೆ 1–0ರಲ್ಲಿ ಸರಣಿ ಜಯ

Last Updated 6 ಡಿಸೆಂಬರ್ 2017, 12:56 IST
ಅಕ್ಷರ ಗಾತ್ರ

ದೆಹಲಿ: ಇಲ್ಲಿನ ಫಿರೋಜ್ ಶಾ ಕೋಟ್ಲಾ ಕ್ರೀಡಾಂಗಣದಲ್ಲಿ ನಡೆದ ಭಾರತ – ಶ್ರೀಲಂಕಾ ವಿರುದ್ಧದ ಮೂರನೇ ಟೆಸ್ಟ್‌ ಪಂದ್ಯ ಬುಧವಾರ ಡ್ರಾನಲ್ಲಿ ಅಂತ್ಯ ಕಂಡಿದೆ.

ಭಾರತ ಮೊದಲ ಇನಿಂಗ್ಸ್‌ನಲ್ಲಿ 536 ರನ್‌ ಹಾಗೂ ಎರಡನೇ ಇನಿಂಗ್ಸ್‌ನಲ್ಲಿ 246 ರನ್‌ ಗಳಿಸಿ ಡಿಕ್ಲೇರ್‌ ಮಾಡಿಕೊಂಡಿತ್ತು.

ಶ್ರೀಲಂಕಾ ಮೊದಲ ಇನಿಂಗ್ಸ್‌ನಲ್ಲಿ 373 ರನ್‌ ಗಳಿಸಿ ಆಲೌಟ್‌ ಆಗಿತ್ತು. ನಂತರ ಎರಡನೇ ಇನಿಂಗ್ಸ್‌ನಲ್ಲಿ  5 ವಿಕೆಟ್‌ ಕಳೆದುಕೊಂಡು 299 ರನ್‌ ಗಳಿಸಿತ್ತು.

ಮಂಗಳವಾರ 410 ರನ್‌ಗಳ ಗುರಿ ಬೆನ್ನತ್ತಿದ ಶ್ರೀಲಂಕಾ ಪಂದ್ಯ ಗೆಲ್ಲುವ ನಿರೀಕ್ಷೆಯಿಂದಲೇ ಎರಡನೇ ಇನಿಂಗ್ಸ್‌ ಆರಂಭಿಸಿತ್ತು. ಆದರೆ ತಂಡದ ಆಸೆಗೆ ಎಡಗೈ ಸ್ಪಿನ್ನರ್‌ ರವೀಂದ್ರ ಜಡೇಜ 2 ವಿಕೆಟ್‌ ಕಬಳಿಸಿ ತಣ್ಣೀರು ಹಾಕಿದರು.

ಕೊನೆಯ ದಿನವಾದ ಬುಧವಾರ ಭಾರತದ ಗೆಲುವಿಗೆ 7 ವಿಕೆಟ್‌ಗಳ ಅಗತ್ಯವಿತ್ತು. 379 ರನ್‌ ಗುರಿಯೊಂದಿಗೆ ಶ್ರೀಲಂಕಾಗೆ ಆಟ ಆರಂಭಿಸಿತ್ತು. ಆದರೆ ದಿನದಾಟದ ಅಂತ್ಯಕ್ಕೆ103 ಓವರ್‌ಗಳಲ್ಲಿ 5 ವಿಕೆಟ್‌ ನಷ್ಟಕ್ಕೆ 299 ರನ್‌ ಗಳಿಸಿ ಆಟ ಮುಗಿಸಿದೆ.

ಶ್ರೀಲಂಕಾ ವಿರುದ್ಧದ ಮೂರು ಪಂದ್ಯಗಳ ಟೆಸ್ಟ್‌ ಸರಣಿಯಲ್ಲಿ ಭಾರತ 1–0ರಲ್ಲಿ ಜಯ ಸಾಧಿಸಿದೆ. ವಿರಾಟ್‌ ಕೊಹ್ಲಿ ನಾಯಕತ್ವದ ಭಾರತ ತಂಡ ಸತತ 9 ಟೆಸ್ಟ್ ಸರಣಿಗಳನ್ನು ಜಯಿಸಿದ ದಾಖಲೆ ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT