ಮುಂಬೈ: ಭಾರತದ ಮಾಜಿ ನಾಯಕ ಮಹೇಂದ್ರ ಸಿಂಗ್ ದೋನಿ ಅವರಿಗೆ 2018ರ ಐಪಿಎಲ್ ಆವೃತ್ತಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್(ಸಿಎಸ್‌ಕೆ) ಪರ ಆಡಲು ಆಡಳಿತ ಮಂಡಳಿ ಅನುಮತಿ ನೀಡಿದೆ.

ಐಪಿಎಲ್ ಆಡಳಿತ ಮಂಡಳಿ ಹಾಗೂ ಬಿಸಿಸಿಐನ ನಿರ್ವಾಹಕ ಸಮಿತಿ(ಸಿಒಎ) ಬುಧವಾರ ನಡೆದ ಸಭೆಯಲ್ಲಿ ‘ಆಟಗಾರರ ಆಯ್ಕೆ, ಸಂಭಾವನೆ, ಅನುಸರಿಸಬೇಕಾದ ನಿಯಮಗಳ ಕುರಿತು ಅಧಿಕಾರಿಗಳು ಚರ್ಚೆ ನಡೆಸಿದ್ದಾರೆ.

ಮುಂದಿನ ಇಂಡಿಯನ್ ಕ್ರಿಕೆಟ್ ಪ್ರೀಮಿಯರ್ ಲೀಗ್(ಐಪಿಎಲ್) ಆವೃತ್ತಿಯ ಹರಾಜು ಪ್ರಕ್ರಿಯೆ ಸಂದರ್ಭದಲ್ಲಿ (ಹರಾಜಿಗೂ ಮುನ್ನ) ಪ್ರತಿ ತಂಡಕ್ಕೆ 5 ಆಟಗಾರರನ್ನು ಉಳಿಸಿಕೊಳ್ಳಲು ಅನುಮತಿ ನೀಡಲಾಗಿದೆ ಎಂದು ಬಿಸಿಸಿಐ ಕಾರ್ಯದರ್ಶಿ ಅಮಿತಾಭ್ ಚೌಂಧರಿ ತಿಳಿಸಿದ್ದಾರೆ.

2013ರಲ್ಲಿ ಸ್ಪಾಟ್ ಫಿಕ್ಸಿಂಗ್ ಮತ್ತು ಬೆಟ್ಟಿಂಗ್ ಹಗರಣಕ್ಕೆ ಸಂಬಂಧಿಸಿ ಸೂಪರ್ ಕಿಂಗ್ಸ್ ಹಾಗೂ ರಾಜಸ್ತಾನ ರಾಯಲ್ ತಂಡಗಳನ್ನು 2 ವರ್ಷ ನಿಷೇಧಿಸಲಾಗಿತ್ತು.

ಈ ಎರಡು ತಂಡಗಳ ನಿಷೇಧದ ಪರಿಣಾಮ 2016 – 17ನೇ ಆವೃತ್ತಿಗಳಲ್ಲಿ ರೈಸಿಂಗ್ ಪುಣೆ ಸೂಪರ್‌ಜೆಂಟ್ ಹಾಗೂ ಗುಜರಾತ್ ಲಯನ್ಸ್ ಹೊಸ ತಂಡಗಳು ಆಡಿದ್ದವು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.