7

ಸಚಿವ ಅನಂತಕುಮಾರ್ ಹೆಗಡೆ ವಿರುದ್ಧ ದೂರು

Published:
Updated:

ಮೈಸೂರು: ಬೆಳಗಾವಿ ಜಿಲ್ಲೆ ಕಿತ್ತೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ ಅವಹೇಳನಕಾರಿಯಾಗಿ ಮಾತನಾಡಿ, ಉದ್ದೇಶಪೂರ್ವಕವಾಗಿ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್‌ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಜೆ.ವಿಜಯಕುಮಾರ್ ಇಲ್ಲಿನ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದಾರೆ.

ದೂರನ್ನು ಸ್ವೀಕರಿಸಿದ ನ್ಯಾಯಾಲಯ ದೇವರಾಜ ಪೊಲೀಸ್ ಠಾಣೆಗೆ ವರ್ಗಾಯಿಸಿದೆ. ‘ಪ್ರಕರಣ ನಡೆದಿರುವುದು ಬೆಳಗಾವಿಯ ಕಿತ್ತೂರಿನಲ್ಲಿ. ಹೀಗಾಗಿ, ದೂರನ್ನು ಅಲ್ಲಿನ ಪೊಲೀಸ್ ಠಾಣೆಗೆ ವರ್ಗಾಯಿಸಲಾಗುವುದು’ ಎಂದು ನಗರ ಪೊಲೀಸ್ ಕಮೀಷನರ್ ಡಾ.ಎ.ಎಸ್. ಸುಬ್ರಹ್ಮಣ್ಯೇಶ್ವರರಾವ್ ತಿಳಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry