ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಂದವರು ಸಾಮರಸ್ಯ ಕದಡದಿರಲಿ: ಸಿ.ಎಂ

Last Updated 6 ಡಿಸೆಂಬರ್ 2017, 19:50 IST
ಅಕ್ಷರ ಗಾತ್ರ

ಭಟ್ಕಳ (ಉತ್ತರ ಕನ್ನಡ): ‘ರಾಜ್ಯಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಷಾ ಆದರೂ ಬರಲಿ. ಪ್ರಧಾನಿ ನರೇಂದ್ರ ಮೋದಿಯಾದರೂ ಬರಲಿ. ಆದರೆ, ಬಂದವರು ಇಲ್ಲಿನ ಸಾಮರಸ್ಯ ಕದಡಬಾರದು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ಇಲ್ಲಿ ಹೇಳಿದರು.

‘ಮುಜರಾಯಿ ಇಲಾಖೆಯ ದೇವಾಲಯಗಳಿಗೆ ದಲಿತ ಅರ್ಚಕರ ನೇಮಕ ಆಗಬಾರದು ಎಂದೇನಿಲ್ಲ. ನಾರಾಯಣ ಗುರು ಹೇಳಿದ ಹಾದಿಯಲ್ಲಿ ನಾವು ಹೆಜ್ಜೆ ಹಾಕುವೆವು. ಯಾರು ಬೇಕಾದರೂ ದೇವಸ್ಥಾನ ನಿರ್ಮಿಸಿಕೊಂಡು ಅವರೇ ಅರ್ಚಕರಾಗಬಹುದು. ಆದರೆ ದಲಿತ ಅರ್ಚಕರ ನೇಮಕ ಸಂಬಂಧ ವಿಶೇಷ ಕಾನೂನು ರಚಿಸುವ ಪ್ರಸ್ತಾವ ಸರ್ಕಾರದ ಮುಂದಿಲ್ಲ’ ಎಂದು ಹೇಳಿದರು.

ರಾಜಕೀಯ ಕಾರ್ಯದರ್ಶಿಗಳ ನೇಮಕ ಸಂಬಂಧ ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ ಎಚ್‌.ಡಿ.ದೇವೇಗೌಡರ ಟೀಕೆಗೆ ಪ್ರತಿಕ್ರಿಯಿಸಿದ ಅವರು, ‘ಕೆಲಸದ ಒತ್ತಡವನ್ನು ಕಡಿಮೆ ಮಾಡಿಕೊಳ್ಳುವ ಸಲುವಾಗಿ 12 ಮಂದಿಯನ್ನು ನೇಮಿಸಿಕೊಳ್ಳಲಾಗಿದೆ. ಇದಕ್ಕೆ ಕಾನೂನಿನಲ್ಲೂ ಅವಕಾಶ ಇದೆ. ದೆಹಲಿಯಂಥ ಕೇಂದ್ರಾಡಳಿತ ಪ್ರದೇಶಗಳಲ್ಲೂ ಹೆಚ್ಚಿನ ಸಂಖ್ಯೆಯಲ್ಲಿ ರಾಜಕೀಯ ಕಾರ್ಯದರ್ಶಿಗಳು ಇದ್ದಾರೆ. ತಮ್ಮ ಅವಧಿಯಲ್ಲಿ ನೇಮಕ ಮಾಡಿಕೊಂಡಿಲ್ಲ ಎಂಬ ಕಾರಣಕ್ಕೆ ದೇವೇಗೌಡರು ಇದಕ್ಕೆ ವಿರೋಧ ಮಾಡುವುದು ಸರಿಯಲ್ಲ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT