7

ಕನ್ನಡ ಸಾಂಸ್ಕೃತಿಕ ಸೌರಭ

Published:
Updated:

ಬೆಂಗಳೂರು: ಕರ್ನಾಟಕ ಏಕೀಕರಣ ವಜ್ರ ಮಹೋತ್ಸವ ವರ್ಷದ ಅಂಗವಾಗಿ ಕನ್ನಡ ಅಭಿವೃದ್ಧಿ ಪ್ರಾಧಿಕಾರವು ದಂಡು ಪ್ರದೇಶ ಕನ್ನಡ ಸಂಘಟನೆಗಳ ಒಕ್ಕೂಟ ಮತ್ತು ಹೆಣ್ಣೂರು ಬಡಾವಣೆ ನಿವಾಸಿಗಳ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದ ಸಹಯೋಗದಲ್ಲಿ ಕನ್ನಡ ಸಾಂಸ್ಕೃತಿಕ ಸೌರಭ ಕಾರ್ಯಕ್ರಮ ಹಮ್ಮಿಕೊಂಡಿತ್ತು.

ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಡಾ.ಕೆ.ಮುರಳೀಧರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ,‘ನಗರದ ಎಲ್ಲ ವಾರ್ಡ್‌ಗಳಲ್ಲಿ ಕನ್ನಡ ಪಸರಿಸುವ ಕೆಲಸ ಮಾಡುತ್ತಿದ್ದೇವೆ. ಕನ್ನಡದ ಕೆಲಸದಲ್ಲಿ ಎಲ್ಲರೂ ಕೈಜೋಡಿಸಬೇಕು’ ಎಂದು ಮನವಿ ಮಾಡಿದರು.

‘ಬೆಂಗಳೂರಿನಲ್ಲಿ ಕನ್ನಡೇತರರ ಸಂಖ್ಯೆ ಶೇ 64ರಷ್ಟು ಇದೆ. ಅವರನ್ನು ದ್ವೇಷ ಮಾಡದೆ ಪ್ರೀತಿಯಿಂದ ಕನ್ನಡ ಕಲಿಸಬೇಕು’ ಎಂದು ಅವರು ಹೇಳಿದರು.

ಇದೇ ವೇಳೆ ಹೆಣ್ಣೂರು ಕ್ರಾಸ್‍ನಿಂದ ಹೆಣ್ಣೂರು ಗ್ರಾಮದವರೆಗೆ ಜನಪದ ಕಲಾ ತಂಡಗಳೊಂದಿಗೆ ಕನ್ನಡ ಜಾಗೃತಿ ಮೆರವಣಿಗೆ ನಡೆಯಿತು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry