ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದ್ವಾರಕಾನಾಥ್‌ ಮುಸ್ಲಿಂ ಧರ್ಮದ ಅಸ್ತಿತ್ವದ ಕುರಿತು ಮಾತನಾಡಲಿ

ದ್ವಾರಕಾನಾಥ್‌ಗೆ ವಿಶ್ವೇಶತೀರ್ಥ ಸ್ವಾಮೀಜಿ ಸವಾಲು
Last Updated 7 ಡಿಸೆಂಬರ್ 2017, 8:50 IST
ಅಕ್ಷರ ಗಾತ್ರ

ಉಡುಪಿ:‘ಶ್ರೀರಾಮನ ಅಸ್ತಿತ್ವದ ಬಗ್ಗೆ ಮಾತನಾಡುವ ಹಿರಿಯ ವಕೀಲ ಸಿ.ಎಸ್. ದ್ವಾರಕಾನಾಥ್ ಅವರಿಗೆ ಮುಸ್ಲಿಂ ಧರ್ಮದ ಅಸ್ತಿತ್ವದ ಬಗ್ಗೆ ಮಾತನಾಡುವುದಕ್ಕೆ ಧೈರ್ಯವಿದೆಯೇ’ ಎಂದು ಪರ್ಯಾಯ ಪೇಜಾವರ ಮಠದ ವಿಶ್ವೇಶತೀರ್ಥ ಸ್ವಾಮೀಜಿ ಸವಾಲು ಹಾಕಿದ್ದಾರೆ.

ದ್ವಾರಕಾನಾಥ್‌ ಅವರು ಮಂಗಳವಾರ ಮಂಗಳೂರಿನಲ್ಲಿ ಶ್ರೀರಾಮನ ಅಸ್ತಿತ್ವಕ್ಕೆ ಪುರಾವೆಗಳು ಇಲ್ಲ ಎಂದು ನೀಡಿದ್ದ ಹೇಳಿಕೆಗೆ ಶ್ರೀಗಳು ಇಲ್ಲಿ ಬುಧವಾರ ಪ್ರತಿಕ್ರಿಯೆ ನೀಡಿದರು.

‘ಇದು ಅವರ ವೈಯಕ್ತಿಕ ನಂಬಕೆಯಾಗಿರಬಹುದು. ಆದರೆ ಅದನ್ನು ಇನ್ನೊಬ್ಬರ ಮೇಲೆ ಹೇರುವುದು ಸರಿಯಲ್ಲ. ಶ್ರೀರಾಮನ ಬಗ್ಗೆ ಜನರಿಗೆ ಅಚಲ ವಿಶ್ವಾಸ ಹಾಗೂ ಧೃಢ ನಂಬಿಕೆ ಇದೆ. ಜನರ ನಂಬಿಕೆ ಅಲುಗಾಡಿಸುವ ಪ್ರಯತ್ನಕ್ಕೆ ಕೈಹಾಕುವುದು ಸರಿಯಲ್ಲ’ ಎಂದು ಸ್ವಾಮೀಜಿ ಹೇಳಿದರು.

‘ಹಿಂದೂಗಳು ಎಲ್ಲವನ್ನೂ ಸಹಿಸುತ್ತಾರೆ ಎಂಬ ಕಾರಣಕ್ಕೆ ಈತರಹ ಹೇಳಿಕೆ ನೀಡುವುದು ಸರಿಯಲ್ಲ. ಇದೇ ಹೇಳಿಕೆಯನ್ನು ಮುಸ್ಲಿಂ ಧರ್ಮದ ಬಗ್ಗೆ ಮಾಡಲು ಅವರಿಗೆ ಸಾಧ್ಯವಿದೆಯೇ’ ಎಂದು ಅವರು ಕೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT