ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಕಾನೂನಿಗೆ ಅಗೌರವ ತೋರಿದ ಪ್ರತಾಪ್‌ ಸಿಂಹ’

Last Updated 7 ಡಿಸೆಂಬರ್ 2017, 10:33 IST
ಅಕ್ಷರ ಗಾತ್ರ

ನಾಗಮಂಗಲ: ಸಂಸದ ಪ್ರತಾಪಸಿಂಹ ಅವರು ತಮ್ಮ ಜವಾಬ್ದಾರಿ ಮರೆತು ಕಾನೂನಿಗೆ ವಿರುದ್ಧವಾಗಿ ವರ್ತನೆ ಮಾಡಿರುವುದು ತಪ್ಪು ಎಂದು ಪಶುಸಂಗೋಪನಾ ಸಚಿವ ಎ.ಮಂಜು ಆರೋಪಿಸಿದರು.

ಪಟ್ಟಣದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ ಪ್ರತಾಪ್‌ ಸಿಂಹ ಕಾರನ್ನು ತಾವೇ ಚಲಾಯಿಸಿಕೊಂಡು ಬಂದು ಪೊಲೀಸರು ಮತ್ತು ಬ್ಯಾರಿಕೇಡ್ ಮೇಲೆ ಹತ್ತಿಸಲು ಪ್ರಯತ್ನಿಸಿದ್ದಾರೆ. ಒಬ್ಬ ಚುನಾಯಿತ ಜನಪ್ರತಿನಿಧಿಯಾಗಿ ಕಾನೂನನ್ನು ಕೈಗೆತ್ತಿಕೊಂಡಿದ್ದು ತಪ್ಪು. ಸಂಸದರ ಈ ನಡೆ ಅವರಿಗೆ ಮತ ಕೊಟ್ಟ ಮತದಾರರಿಗೆ ಅಗೌರವ ತರುವಂಥದ್ದು ಎಂದು ದೂರಿದರು.

ನಾಗಮಂಗಲ ಕ್ಷೇತ್ರದ ಚುನಾವಣೆ ಚುನಾವಣೆಯು ಚಲುವರಾಯಸ್ವಾಮಿ ಹಾಗೂ ಎಚ್‌.ಡಿ.ದೇವೇಗೌಡ ಅವರ ನಡುವೆ ನಡೆಯುವ ಸ್ಪರ್ಧೆಯಾಗಿದೆ. ರಾಜ್ಯದಲ್ಲಿ 1512 ಪಶು ಅಸ್ಪತ್ರೆಗಳನ್ನು ಮೇಲ್ದರ್ಜೆಗೆ ಏರಿಸಲಾಗಿದೆ. 660 ಪಶುವೈದ್ಯರನ್ನು ನೇರ ನೇಮಕಾತಿ ಮಾಡಿಕೊಳ್ಳಲಾಗಿದೆ. ಇನ್ನು 10–15 ದಿನಗಳಲ್ಲಿ ರಾಜ್ಯದ ಎಲ್ಲಾ ಅಸ್ಪತ್ರೆಗಳಿಗೆ ವೈದ್ಯರು ಹಾಜರಾಗುತ್ತಾರೆ ಎಂದು ತಿಳಿಸಿದರು. ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎನ್.ಎಂ.ರಾಮಸ್ವಾಮಿಗೌಡ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT